ಕುಣಿಗಲ್: ಹಳ್ಳದಲ್ಲಿ ಟ್ರ್ಯಾಕ್ಟರ್ ಉರುಳಿ ಬಿದ್ದ ಪರಿಣಾಮ ತಂದೆ ಹಾಗೂ ಮಗ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ತಾಲ್ಲೂಕಿನ ಕೊತ್ತಗೆರೆ ಹೋಬಳಿ ಕೊಡಹಳ್ಳಿಪಾಳ್ಯದಲ್ಲಿ ಭಾನುವಾರ ನಡೆದಿದೆ. ತಾಲ್ಲೂಕಿನ ಜಾಣಗೆರೆ ಗ್ರಾಮದ ಶಿವರಾಮಯ್ಯ(52), ಮಗ ಹರೀಶ್ (21)ಸಾವನ್ನಪ್ಪಿದ ದುರ್ದೈವಿಗಳು. ಶಿವರಾಮಯ್ಯ ಅವರು ಸಾಹಿತಿ, ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಾಣಗೆರೆ ವೆಂಕಟರಾಮಯ್ಯ ಅವರ ಸಹೋದರರಾಗಿದ್ದಾರೆ.
ಟ್ರ್ಯಾಕ್ಟರ್ ನಲ್ಲಿ ಅಡಿಕೆ ಕಾಯಿ ತುಂಬಿಕೊಂಡು ಬರುತ್ತಿದ್ದ ಸಂದರ್ಭದಲ್ಲಿ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.