ರಾಯಚೂರು: ಪಿಡಿಒ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂದು ಆರೋಪಿಸಿ ಪರೀಕ್ಷೆ ಬಿಟ್ಟು ಪ್ರತಿಭಟನೆ ನಡೆಸಿದ್ದ 12 ಜನ ಅಭ್ಯರ್ಥಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಸಿಂಧನೂರು ಟೌನ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ. ಬಾನುವಾರ ಸಿಂಧನೂರು ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಪರೀಕ್ಷೆ ನಡೆಯುತಿತ್ತು. ಆದರೆ, ಈ ವೇಳೆ ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿದ್ದರೂ ಕೇವಲ 12 ಪ್ರಶ್ನೆ ಪತ್ರಿಕೆಗಳು ಬಂದಿದ್ದವು. ಇದರಿಂದ ಕೋಪಿತಗೊಂಡಿದ್ದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು. ಅಲ್ಲದೇ, ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂದು ಆರೋಪಿಸಿದರು.
ಹೀಗಾಗಿ ಪರೀಕ್ಷಾ ಮೇಲ್ವಿಚಾರಕ ಬಸವರಾಜ ತಡಕಲ್ ದೂರು ನೀಡಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿರುವುದು, ಪ್ರಚೋದನೆ, ರಸ್ತೆ ತಡೆದು ಪ್ರತಿಭಟನೆ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ.