ಬೆಂಗಳೂರು: ವಿಪಕ್ಷಗಳು ಇತ್ತೀಚೆಗೆ ಸರ್ಕಾರದ ಮೇಲೆ ಹಲವಾರು ಆರೋಪಗಳನ್ನು ಮಾಡುತ್ತಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ಸಚಿವರ ಸಭೆ ನಡೆಸಿದರು.
ಮುಂದಿನ ತಿಂಗಳು ಬೆಳಗಾವಿಯ ಚಳಿಗಾಲದ ಅಧಿವೇಶ ಸಹ ಆರಂಭವಾಗಲಿದೆ. ಬಿಜೆಪಿ ಆರೋಪಗಳ ಮೇಲೆ ಪ್ರತಿಭಟನೆ ಮಾಡಬಹುದು. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಹಿರಿಯ ಸಚಿವರುಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಬಿಪಿಎಲ್ ಕಾರ್ಡ್ ರದ್ದು ಗದ್ದಲ, ವಕ್ಫ್ ಮತ್ತು ರೈತರ ನಡುವಿನ ಭೂಮಿ ಸಮರ, ಬಿಜೆಪಿಯಿಂದ ಕಾಂಗ್ರೆಸ್ ಶಾಸಕರ ಖರೀದಿ ವಿಚಾರ, ರಾಜ್ಯಪಾಲರ ಬಳಿ ಬಾಕಿ ಉಳಿದ ಬಿಲ್ ಮತ್ತು ಬೆಳಗಾವಿಯಲ್ಲಿ ಮಂಡಿಸಬೇಕಾದ ಬಿಲ್ ಗಳ ಕುರಿತು ಚರ್ಚೆ ನಡೆಸಲಾಯಿತು.
ಈ ವೇಳೆ ವಿಪಕ್ಷಗಳಿಗೆ ತಿರುಗೇಟು ನೀಡುವ ಕುರಿತು ಕೂಡ ಚರ್ಚಿಸಲಾಯಿತು. ಈಗಾಗಲೇ ವಿರೋಧ ಪಕ್ಷ ಬಿಜೆಪಿ, ಸರ್ಕಾರ ಪತನವಾಗಲಿದೆ ಎಂದು ಹೇಳುತ್ತಲೇ ಬರುತ್ತಿದೆ. ಸಿಎಂ ಇಂದಿನ ಸಭೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಹಿರಿಯ ಸಚಿವರು ನಿಗಾ ವಹಿಸಲು ಸೂಚನೆ ನೀಡಿದ್ದಾರೆ.
ಬೆಳಗಾವಿ ಅಧಿವೇಶನ ಹಿನ್ನೆಲೆ ಇಂದಿನ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿತ್ತು. ಹೀಗಾಗಿ ಇಂದು ಹಲವಾರು ವಿಷಯಗಳ ಕುರಿತು ಚರ್ಚಿಸಲಾಯಿತು.