ಪ್ರಧಾನಿ ನರೇಂದ್ರ ಮೋದಿ ಅವರು ಈಗ ಬ್ರೆಜಿಲ್ ಪ್ರವಾಸದಲ್ಲಿದ್ದು, 19ನೇ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.
ಹಸಿವು ಮತ್ತು ಬಡತನದ ವಿರುದ್ಧ ಹೋರಾಟದ” ಕುರಿತು ಅವರು ಮಾತನಾಡಿದ್ದಾರೆ. ಅಂತರ್ಗತ ಅಭಿವೃದ್ಧಿ ಮತ್ತು ಜಾಗತಿಕ ದಕ್ಷಿಣದ ಆಕಾಂಕ್ಷೆಗಳಿಗೆ ಭಾರತದ ಬದ್ಧತೆ ಬಗ್ಗೆ ಮಾತನಾಡಿದ್ದಾರೆ. ಗತಿಕ ನಾಯಕರು ಬಡತನ ನಿವಾರಣೆ, ಆಹಾರ ಭದ್ರತೆ ಮತ್ತು ಜಾಗತಿಕ ಆಡಳಿತ ಸುಧಾರಣೆಗಳಂತಹ ನಿರ್ಣಾಯಕ ವಿಷಯಗಳ ಕುರಿತು ಚರ್ಚಿಸಿದ್ದಾರೆ.
ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಗ್ಲೋಬಲ್ ಸೌತ್‌ಗಾಗಿ ಧ್ವನಿ ಎತ್ತಿದ್ದಾರೆ. ಈ ಪ್ರದೇಶದ ಸವಾಲುಗಳು ಮತ್ತು ಆದ್ಯತೆಗಳನ್ನು ಮನಸ್ಸಿನಲ್ಲಿಟ್ಟುಕೊಂಡಾಗ ಮಾತ್ರ ಜಾಗತಿಕ ವೇದಿಕೆಯಲ್ಲಿ ನಡೆಯುತ್ತಿರುವ ಚರ್ಚೆಗಳು ಯಶಸ್ವಿಯಾಗಲು ಸಾಧ್ಯ ಎಂದು ಹೇಳಿದ್ದಾರೆ.
ಜಾಗತಿಕ ಸಂಘರ್ಷಗಳಿಂದ ಉಂಟಾದ ಆಹಾರ, ಇಂಧನ ಮತ್ತು ರಸಗೊಬ್ಬರ ಬಿಕ್ಕಟ್ಟಿನಿಂದ ಜಾಗತಿಕ ದಕ್ಷಿಣದ ದೇಶಗಳ ಮೇಲೆ ಹೆಚ್ಚು ಪ್ರತಿಕೂಲ ಪರಿಣಾಮ ಬೀರುತ್ತದೆ. ಆದ್ದರಿಂದ ನಾವು ಜಾಗತಿಕ ದಕ್ಷಿಣದ ಸವಾಲುಗಳು ಮತ್ತು ಆದ್ಯತೆಗಳನ್ನು ಮನಸ್ಸಿನಲ್ಲಿಟ್ಟುಕೊಂಡಾಗ ಮಾತ್ರ ನಮ್ಮ ಚರ್ಚೆಗಳು ಯಶಸ್ವಿಯಾಗುತ್ತವೆ ಎಂದು ಉಚ್ಛರಿಸಿದ್ದಾರೆ.