ತುಮಕೂರು: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯಾಗಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ಸುಳ್ಳು ಜಾಹೀರಾತು ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಕ್ರೋಶ ವ್ಯಕ್ತಪಡಿಸಿದ್ದು, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ವಿಷಯವಾಗಿ ಗೃಹ ಸಚಿವ ಮಾತನಾಡಿದ್ದಾರೆ.
ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸೂಚನೆ ನೀಡಿದ್ದಾರೆ. ಆ ಸರ್ಕಾರದ ಮೇಲೆ ಎಲ್ಲ ರೀತಿಯ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮತ್ತೊಮ್ಮೆ ಜಾಹೀರಾತು ಪರಿಶೀಲಿಸಿ ಮೊಕದ್ದಮೆ ದಾಖಲಿಸಲಾಗುವುದು’ ಎಂದಿದ್ದಾರೆ.
ರಾಜ್ಯದಲ್ಲಿ ಬಡ ಜನರಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ, ಮಹಾರಾಷ್ಟ್ರ ಸರ್ಕಾರ ಅಭಿವೃದ್ಧಿ ವಿಚಾರಗಳನ್ನು ಬದಿಗೊತ್ತಿ ಗ್ಯಾರಂಟಿ ಘೋಷಣೆ ಮಾಡಲಾಗಿತ್ತು. ಆದರೆ ಅನುಷ್ಠಾನ ಮಾಡಿಲ್ಲ. ಕಾಂಗ್ರೆಸ್ ಸುಳ್ಳು ಹೇಳುತ್ತಿದೆ ಎಂದು ಸುಳ್ಳು ಹೇಳಿದೆ. ಹೀಗಾಗಿ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.