ಶಿವಮೊಗ್ಗ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ. ಕಾಂಗ್ರೆಸ್ ಜಾತಿಗಣತಿಯನ್ನು ಚುನಾವಣೆ ಟೂಲ್ ಕಿಟ್ ಅನ್ನಾಗಿ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಜಾತಿಗಣತಿಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಹಾರಾಷ್ಟ್ರ ಚುನಾವಣೆಯಲ್ಲಿ ಜಾತಿಗಣತಿ ಕುರಿತು ಮಾತನಾಡಿದ್ದಾರೆ. ಈ ಮೂಲಕ ಹಿಂದುಳಿದವರ ಭಾವನೆಗಳ ಜತೆ ಆಟವಾಡುವ ಕಾರ್ಯ ಮಾಡುತ್ತಿದ್ದಾರೆ. ಸಿಎಂ ಸಮಾವೇಶ ಮಾಡುವುದಾಗಿ ಹೇಳಿದ್ದಾರೆ. ಇವರಿಗೆ ಅಧಿಕಾರಕ್ಕೆ ಮಾತ್ರ ಹಿಂದುಳಿದ ವರ್ಗ ಬೇಕು ಎಂದು ಗುಡುಗಿದ್ದಾರೆ.
ಬಿಜೆಪಿ, ಆರ್‌ಎಸ್‌ಎಸ್ ವಿಷಕಾರಿ ಹಾವು, ಅದನ್ನು ಕೊಲ್ಲಿ’ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಕಿಡಿಕಾರಿರುವ ಅವರು, ಹಿರಿಯ ನಾಯಕರು ಈ ರೀತಿ ಮಾತನಾಡಬಾರದಿತ್ತು. ಅವರು ದೇಶದ ಜನರಲ್ಲಿ ಕ್ಷಮೆ ಕೇಳಬೇಕು ಎಂದು ಸಲಹೆ ನೀಡಿದ್ದಾರೆ.
ತಮ್ಮ ಮೇಲೆ ಇದ್ದ ಶೇ.40 ಕಮಿಷನ್ ಆರೋಪ ಸುಳ್ಳು ಎಂದು ಲೋಕಾಯುಕ್ತ ವರದಿ ನೀಡಿದೆ. ಆರೋಪ ಬಂದಾಗ ನಾನು ರಾಜೀನಾಮೆ ಕೊಟ್ಟಿದ್ದೆ. ನಂತರ ತನಿಖೆಯಲ್ಲಿ ಕ್ಲೀನ್ ಚಿಟ್ ದೊರೆಯಿತು. ಹೀಗಾಗಿ ನಾನು ಶುಭ್ರ ಎಂದಿದ್ದಾರೆ.