ಬೆಂಗಳೂರು: ಮಾರುಕಟ್ಟೆಯಲ್ಲಿ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿಕೆಯಾಗಿದೆ. ಈ ಮಧ್ಯೆ ಈಗ ಮತ್ತೊಂದು ಶಾಕ್ ಎದುರಾಗಿದೆ.
ಸರ್ಕಾರಿ ಆಸ್ಪತ್ರೆಯಲ್ಲಿ ನೀಡುತ್ತಿರುವ ಉಚಿತ ಚಿಕಿತ್ಸೆ (Free Treatment) ಕೊಡುವ ವೈದ್ಯಕೀಯ (Medical) ಬೆಲೆಯನ್ನು ದುಪ್ಪಟ್ಟು ಮಾಡಿಲಾಗಿದೆ. ಹೀಗಾಗಿ ಸಾರ್ವಜನಿಕರು ಸಂಕಷ್ಟ ಪಡುವಂತಾಗಿದೆ.
ಉಚಿತ ಚಿಕಿತ್ಸೆ ಕೊಡುವ ವೈದ್ಯಕೀಯ ಬೆಲೆಯನ್ನು ದುಪ್ಪಟ್ಟು ಮಾಡಿ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಗಳ ವೈದ್ಯಕೀಯ ಸೇವೆಗಳ ಬೆಲೆ ಪರಿಷ್ಕರಣೆ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಗಳ ವೈದ್ಯಕೀಯ ಸೇವೆಯಲ್ಲಿ ಶೇ. 10 ರಿಂದ ಶೇ. 20ರ ವರೆಗೆ ದರ ಏರಿಸಲಾಗಿದೆ.
ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ವೈದ್ಯಕೀಯ ಸೇವೆ ಏರಿಕೆ ಮಾಡಲಾಗಿದೆ. ಈ ಬಗ್ಗೆ ಈಗಾಗಲೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಏರಿಕೆ ಬಗ್ಗೆ ನೋಟಿಸ್ ನೀಡಲಾಗಿದೆ. ಆಸ್ಪತ್ರೆಯ ಹೊರರೋಗಿ ವಿಭಾಗದ ಮುಂಭಾಗದಲ್ಲಿ ದರ ಏರಿಕೆ ಬಗ್ಗೆ ಮಾಹಿತಿ ಇರುವ ನೋಟಿಸ್ ಅಂಟಿಸಲಾಗಿದೆ. ಇದರಿಂದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.