ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವುದೇ ನಮ್ಮ ಗುರಿ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಟೆಕ್ ಶೃಂಗಸಭೆಯಲ್ಲಿ ಸ್ಟಾರ್ಟ್ ಅಪ್ ಸ್ಪ್ರಿಂಗ್ ಬೋರ್ಡ್ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆರೋಗ್ಯ ಕ್ಷೇತ್ರವನ್ನು ಸುಧಾರಿಸುವಲ್ಲಿ ತಂತ್ರಜ್ಞಾನದ ಪಾತ್ರ ಹೆಚ್ಚಿದೆ. ಗ್ರಾಮೀಣ ಪ್ರದೇಶಗಳಲ್ಲಿ ಉತ್ಕೃಷ್ಟ ಗುಣಮಟ್ಟದ ಆರೋಗ್ಯ ಸೇವೆಯ ಅಗತ್ಯತೆ ಇದೆ. ಹೀಗಾಗಿ ಎಐ, ಟೆಲಿಮೆಡಿಸಿನ್ ಮತ್ತು ಟೆಲಿ-ಐಸಿಯುಗಳ ಸಮರ್ಪಕ ಬಳಕೆಯೊಂದಿಗೆ ಅತ್ಯಾಧುನಿಕ ಆರೋಗ್ಯ ಸೇವೆ ನೀಡಲು ನಾವು ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.