ಇಸ್ಲಾಮಾನಾದ್: ಪಾಕ್ ನಲ್ಲಿ (Pakistan) ನಾಗರಿಕರು ತೆರಳುತ್ತಿದ್ದ ಬಸ್ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ ಸುಮಾರು 50 ಜನ ಸಾವನ್ನಪ್ಪಿ, 20ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕರ‍್ರಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪರಾಚಿನಾರ್‌ನಿಂದ ಖೈಬರ್ ಪಖ್ತುಂಖ್ವಾದ ರಾಜಧಾನಿ ಪೆಶಾವರ್ ಕಡೆಗೆ ಹೊರಟಿದ್ದ ವಾಹನಗಳ ಮೇಲೆ ಉಗ್ರರು ಈ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ 8 ಜನ ಮಹಿಳೆಯರು ಮತ್ತು ಐದು ಜನ ಮಕ್ಕಳು ಇದ್ದಾರೆ ಎದು ತಿಳಿದು ಬಂದಿದೆ. ಸಾವನ್ನಪ್ಪಿದವರ ಪೈಕಿ ಶಿಯಾ ಸಮುದಾಯದವರೇ ಹೆಚ್ಚಿರಬಹುದು ಎಂದು ಶಂಕಿಸಲಾಗಿದೆ.
ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಅಲಿ ಅಮೀನ್ ಖಾನ್ ಗಂದಾಪುರ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಪ್ರಾಂತ್ಯದ ಎಲ್ಲಾ ರಸ್ತೆಗಳನ್ನು ಸುರಕ್ಷಿತವಾಗಿರಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಅಲ್ಲದೇ, ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ.