ಬೆಂಗಳೂರು: ವಕ್ಫ್ ವಿರುದ್ಧ ತಿರುಗಿ ಬಿದ್ದಿರುವ ಬಿಜೆಪಿ, ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ. ಇದೇ ವಿಷಯ ಮುಂದಿಟ್ಟುಕೊಂಡಿರುವ ಬಿಜೆಪಿಯು, ಈಗ ಕಾಂಗ್ರೆಸ್ ವಿರುದ್ಧ ಹರಿಹಾಯಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯಿತು.
ಬಿಜೆಪಿ ವತಿಯಿಂದ ‘ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಯಡಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಿತು. ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದೆ. ಈ ವೇಳೆ ವಕ್ಫ್ ರದ್ದು ಮಾಡಬೇಕೆಂದು ಆಗ್ರಹಿಸಲಾಗಿದೆ.
ರದ್ದಾಗಲಿ, ವಕ್ಫ್ ಬೋರ್ಡ್ ರದ್ದಾಗಲಿ’’ ಎಂಬ ಘೋಷಣೆಯನ್ನು ಬಿಜೆಪಿ ಹೊರಡಿಸಿತು. ರೈತರ ಜಮೀನು, ದೇವಸ್ಥಾನ ಸೇರಿದಂತೆ ಹಲವು ಆಸ್ತಿಗಳಲ್ಲಿ ವಕ್ಫ್ ಬೋರ್ಡ್ ಆಸ್ತಿ ಎಂದು ನಮೂದಿಸಲಾಗಿದೆ. ಹೀಗಾಗಿ ಕೂಡಲೇ ವಕ್ಫ್ ರದ್ದುಗೊಳಿಸಬೇಕೆಂದು ಬಿಜೆಪಿ ಪ್ರತಿಭಟಿಸಿತು. ಅಂತಾ ನಮೂದಾಗುತ್ತಿರುವುದನ್ನು ವಿರೋಧಿಸಿ ಬಿಜೆಪಿ ರಾಜ್ಯದ ಹಲವಡೆ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ನಾಯಕರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಮಂಡ್ಯದಲ್ಲಿ ಮಾಜಿ ಸಂಸದೆ ಸುಮಲತಾ ಅಂಬರೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮೊದಲ ಬಾರಿಗೆ ಸುಮಲತಾ ಅವರು ಪ್ರತಿಭಟನೆಯಲ್ಲಿ ಕಾಣಿಸಿಕೊಂಡರು.
ಮತ್ತೊಂದೆಡೆ ಬಸನಗೌಡ ಪಾಟೀಲ್ ಯತ್ನಾಳ್ ಬಣವೂ ಪ್ರತ್ಯೇಕ ಹೋರಾಟಕ್ಕೆ ಮುಂದಾಗಿದೆ.