ಮುರುಡೇಶ್ವರ: ಈ ಬಾರಿಯೂ ಎಲ್ಲ ಸಮೀಕ್ಷೆಗಳು ತಲೆ ಕೆಳಗಾಗುತ್ತವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಹಾರಾಷ್ಟ್ರ ಚುನಾವಣೆ ಸೇರಿದಂತೆ ಮತದಾನದ ಫಲಿತಾಂಶದ ಕುರಿತು ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶ ನಾಳೆ ಪ್ರಕಟವಾಗುತ್ತಿದ್ದು, ರಾಜ್ಯದ ಮೂರು ಕ್ಷೇತ್ರ ಸೇರಿದಂತೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿಲಿದೆ ಎಂದಿದ್ದಾರೆ.
ನಾನು ಕೂಡ ಪ್ರಚಾರಕ್ಕೆ ಹೋಗಿದ್ದೆ. ಆಗ ಕಾಂಗ್ರೆಸ್ ಪರ ಅಲೆ ಕಂಡಿತು. ಆದರೆ ಮತ ಪೆಟ್ಟಿಗೆಯಲ್ಲಿ ಏನಿದೆ ಎಂಬುವುದು ಯಾರಿಗೂ ತಿಳಿಯುವುದಿಲ್ಲ. ಜಾರ್ಖಂಡ್ ಬಗ್ಗೆ ಗೊತ್ತಿಲ್ಲ. ಆದರೆ, ಮಹಾರಾಷ್ಟ್ರ ಮತ್ತು ರಾಜ್ಯದಲ್ಲಿ ನಮ್ಮದೇ ಗೆಲುವು ಎಂದಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಕೇವಲ 16 ಸಾವಿರ ಮತಗಳು ಬಂದಿದ್ದವು. ಆದರೆ, ಈ ಬಾರಿ ಗೆಲುವು ನಿಶ್ಚಿತ ಎಂಬ ವಿಶ್ವಾಸವಿದೆ. ರಾಮನಗರದಲ್ಲಿ ಇಕ್ಬಾಲ್ ಹುಸೇನ್, ಮಾಗಡಿಯಲ್ಲಿ ಬಾಲಕೃಷ್ಣ, ಕನಕಪುರದಲ್ಲಿ ನಾನು ಗೆದ್ದಿದ್ದೇವೆ. ಚನ್ನಪಟ್ಟಣದಲ್ಲಿ ಮಾತ್ರ ಗೆದ್ದಿರಲಿಲ್ಲ. ಈ ಬಾರಿ ಗೆಲುವು ಖಂಡಿತ ಸಿಗಲಿದೆ ಎಂದಿದ್ದಾರೆ.
ಜಮೀರ್ ಉತ್ತಮ ಕೆಲಸಗಾರ. ಇದು ಪಕ್ಷದ ಆಂತರಿಕ ವಿಚಾರ. ಅವರಿಗೆ ಈ ಬಗ್ಗೆ ಬುದ್ದಿ ಹೇಳಲಾಗಿದೆ. ಅವರು ಆತುರವಾಗಿ ಒಂದಷ್ಟು ಹೇಳಿಕೆ ಕೊಟ್ಟಿದ್ದಾರೆ. ಇದು ತಪ್ಪು ಎಂದು ನಾವು ಹೇಳಿದ್ದೇವೆ ಎಂದು ಜಮೀಪ್ ಬಗ್ಗೆ ಹೇಳಿದ್ದಾರೆ.