ಬೆಂಗಳೂರು: ಬಿಜೆಪಿ ಅಧಿಕಾರವಧಿಯಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ಆದರೆ, ವಿಚಾರಣೆ ಎದುರಿಸಿದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೋವಿ ನಿಗಮದ ಫಲಾನುಭವಿಗಳಿಗೆ ಮೆಟಿರಿಯಲ್ಸ್ ಪೂರೈಸುತ್ತಿದ್ದ 35 ವರ್ಷದ ಜೀವಾ ಎನ್ನುವ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅದರಲ್ಲೂ ಮುಖ್ಯವಾಗಿ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಕರೆದು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಯುವತಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದ್ದು, ಇದು ಭಾರೀ ಸಂಚಲನ ಮೂಡಿಸಿದೆ.
ಮೃತ ಸಹೋದರಿ ಸಿಐಡಿ ತನಿಖಾಧಿಕಾರಿ ಕನಕಲಕ್ಷ್ಮೀ ಕಿರುಕುಳ ನೀಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು 11 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.