ಬೀದರ್: ಬುಡಾ ಸೈಟ್ ಬಿಡುಗಡೆಗಾಗಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಆಯುಕ್ತರು ಹಾಗೂ ಸದಸ್ಯರನ್ನು ಬಂಧಿಸಿರುವ ಘಟನೆ ನಡೆದಿದೆ.
ಗಡಿಜಿಲ್ಲೆ ಬೀದರ್ ನಲ್ಲಿ (Bidar) ಲೋಕಾಯುಕ್ತ ಪೊಲೀಸರು (Lokayukta Officers) ದಾಳಿ ನಡೆಸಿ, ಲಂಚ ಪಡೆಯುತ್ತಿದ್ದವರನ್ನು ಬಂಧಿಸಿದ್ದಾರೆ. ಬುಡಾದಿಂದ (BUDA) (ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ) ಲೇಔಟ್ ಸೈಟ್‌ಗಳನ್ನು ರಿಲೀಸ್ ಮಾಡಲು 50 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬುಡಾ ಆಯುಕ್ತ ಶ್ರೀಕಾಂತ್ ಚಿಮ್ಮಕೊಡೆ ಹಾಗೂ ಬುಡಾ ಸದಸ್ಯ ಚಂದ್ರಕಾಂತ್ ರೆಡ್ಡಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಲಂಚದ ಹಣ ತೆಗೆದುಕೊಳ್ಳುತ್ತಿದ್ದ ಸಿದ್ದು ಹೂಗಾರನನ್ನು ಲೋಕಾ ಪೊಲೀಸರು ಬೀದರ್‌ನ ಪ್ರತಾಪ್ ನಗರದ ಬಳಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. 50 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದು, ದಾಳಿ ವೇಳೆ 10 ಲಕ್ಷ ರೂ. ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ.

















