ನೆಲಮಂಗಲ: ಸೋದರ ಮಾವನಿಂದಲೇ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ ಪೊಲೀಸರಿಂದ 30 ವರ್ಷದ ಸೋದರ ಮಾವನನ್ನು ಬಂಧಿಸಲಾಗಿದೆ. ಬಾಲಕಿ ತಾಯಿ ದೂರಿನ ಆಧಾರದ ಮೇಲೆ ನೆಲಮಂಗಲ ಟೌನ್ ಠಾಣೆಯಲ್ಲಿ ಬಿಎನ್ಎಸ್ ಜೊತೆಗೆ ಪೋಕ್ಸೊ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಅಪ್ರಾಪ್ತ ಬಾಲಕಿಯು ಕಾಲೇಜಿನಲ್ಲಿ ಯುವತಿ ಪ್ರಥಮ ಪಿಯುಸಿ ಓದುತ್ತಿದ್ದಾಳೆ. ಸೆಪ್ಟೆಂಬರ್ನಲ್ಲಿ ಆರೋಪಿ ಸೋದರ ಮಾವ ಮನೆಗೆ ಬಂದಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಬಲವಂತವಾಗಿ ಅತ್ಯಾಚಾರವೆಸಗಿದ್ದ ಎನ್ನಲಾಗಿದೆ. ಹೀಗಾಗಿ ಬಾಲಕಿ ತಾಯಿ ನೆಲಮಂಗಲ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.