ರಾಮನಗರ: ಚನ್ನಪಟ್ಟಣದಲ್ಲಿ (Channapatna) ಮತದಾನ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಹಾವು ಏಣಿ ಆಟ ಶುರುವಾಗಿದೆ. 6 ಸುತ್ತಿನ ಮತ ಎಣಿಕೆಯಯವರೆಗೂ ಮುನ್ನಡೆ ಕಾಯ್ದುಕೊಂಡಿದ್ದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) 7ನೇ ಸುತ್ತಿನಲ್ಲಿ ಹಿಂದೆ ಬಿದ್ದಿದ್ದಾರೆ.
ಆರಂಭದಲ್ಲಿ ಹಿನ್ನಡೆ ಅನುಭವಿಸಿದ್ದ ಕಾಂಗ್ರೆಸ್‌ನ ಸಿಪಿ ಯೋಗೇಶ್ವರ್ (CP Yogeshwar) 7ನೇ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದಾರೆ. ಸಿ.ಪಿ. ಯೋಗೇಶ್ವರ್ ಗೆ 11,178 ಮತಗಳ ಮುನ್ನಡೆ ಸಿಕ್ಕಿದೆ. ನಗರದ ಪ್ರದೇಶದ ಎಣಿಕಾ ಕಾರ್ಯದಲ್ಲಿ ಸಿಪಿವೈ ಮುನ್ನಡೆ ಕಾಯ್ದುಕೊಂಡಿದ್ದಾರೆ.
ನಗರ ಪ್ರದೇಶದಲ್ಲಿ ಅಲ್ಪಸಂಖ್ಯಾತ ಮತಗಳು ಜಾಸ್ತಿ ಇರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಲಾಭವಾಗಿದೆ ಎನ್ನಲಾಗುತ್ತಿದೆ. ಚನ್ನಪಟ್ಟಣದಲ್ಲಿ ಒಟ್ಟು 20 ಸುತ್ತುಗಳಿವೆ. ಚನ್ನಪಟ್ಟಣದಲ್ಲಿ ಯಾರೇ ಗೆದ್ದರೂ ಮೂಲ್ಕಾಲ್ಕು ಸಾವಿರ ಮತಗಳ ಅಂತರವಷ್ಟೇ ಎಂದು ನಿರೀಕ್ಷಿಸಲಾಗಿದೆ. ಇನ್ನೂ 13 ಸುತ್ತುಗಳಲ್ಲಿ ಫಲಿತಾಂಶ ಏನಾಗಲಿದೆ ಎಂಬುವುದನ್ನು ನೋಡಬೇಕಿದೆ.