Karnataka By Election Results 2024: ರಾಜ್ಯದ ಮೂರು ಕ್ಷೇತ್ರಗಳಿಗೆ ನಡೆದಿದ್ದ ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಸಂಡೂರಿನಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗಿದೆ.
ಆದರೆ, ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ಇನ್ನುಳಿದ ಎರಡು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದ್ದು, ಆಡಳಿತಾರೂಢ ಪಕ್ಷ ಕಾಂಗ್ರೆಸ್ ಪಾಳಯದಲ್ಲಿ ಸಂತಸ ಮನೆ ಮಾಡಿದೆ. ಮೂರು ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ನಡೆಯುತ್ತಿದೆ.
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಸದ್ಯ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.