ಭಾರತ ಹಾಗೂ ಆಸ್ಟ್ರೇಲಿಯಾ ಮಧ್ಯೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಭಾರತವೇ ಪ್ರಾಭಲ್ಯ ಮೆರೆದಿದೆ.
ಎರಡನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡವನ್ನು 104 ರನ್ ಗಳಿಗೆ ಭಾರತ ಆಲೌಟ್ ಮಾಡಿದೆ. ನಂತರ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ಯಾವುದೇ ವಿಕೆಟ್ ನಷ್ಟವಿಲ್ಲದೆ 172 ರನ್ ಗಳಿಸಿದೆ. ಈ ಮೂಲಕ ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ 218 ರನ್ ಗಳ ಮುನ್ನಡೆ ಪಡೆದಿದೆ. ಭಾರತ ಪರ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ತಲಾ ಅರ್ಧಶತಕ ಸಿಡಿಸಿ ಆಡುತ್ತಿದ್ದಾರೆ. ಆದರೆ, ಎರಡನೇ ಇನ್ನಿಂಗ್ಸ್ ನಲ್ಲಿ ಭಾರತೀಯ ಆಟಗಾರರು ಆಸ್ಟ್ರೇಲಿಯಾ ಬೌಲರ್ ಗಳಿಗೆ ಸಿಂಹ ಸ್ವಪ್ನವಾದರು.
ಅಜೇಯರಾಗಿ ಉಳಿದು ಮೂರನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿರುವ ಕನ್ನಡಿಗ ಕೆಎಲ್ ರಾಹುಲ್ 62 ರನ್ ಹಾಗೂ ಯಶಸ್ವಿ ಜೈಸ್ವಾಲ್ 90 ರನ್ ಗಳಿಸಿದ್ದಾರೆ. ಭಾರತ ಮೊದಲ ಇನಿಂಗ್ಸ್‌ನಲ್ಲಿ 46 ರನ್ ಗಳ ಮುನ್ನಡೆ ಪಡೆದುಕೊಂಡಿತ್ತು.
ಮೊದಲ ದಿನದಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 67 ರನ್ ಬಾರಿಸಿದ್ದ ಕಾಂಗರೂ ಪಡೆ, ಎರಡನೇ ದಿನ 37 ರನ್ ಗಳಿಸುವಷ್ಟರಲ್ಲಿ ಉಳಿದ ಮೂರು ವಿಕೆಟ್ ಕಳೆದುಕೊಂಡಿದು. ಭಾರತ ತಂಡದ ನಾಯಕ ಜಸ್ಪ್ರೀತ್ ಬುಮ್ರಾ ಐದು ವಿಕೆಟ್ ಪಡೆದು ಮಿಂಚಿದರು.