ಚನ್ನಪಟ್ಟಣ ಕ್ಷೇತ್ರದಲ್ಲಿ ಭರ್ಜರಿ ಜಯ ಸಾಧಿಸಿದ ಸಿ.ಪಿ. ಯೋಗೇಶ್ವರ್ ಅವರಿಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಚನ್ನಪಟ್ಟಣದಲ್ಲಿ ವಾಹನದ ಮೇಲಿದ್ದ ಸಿ.ಪಿ.ಯೋಗೇಶ್ವರ್ ಅವರಿಗೆ ಬೆಂಬಲಿಗರು ಹಾಲಿನ ಪ್ಯಾಕೆಟ್‌ಗಳಿಂದ ಅಭಿಷೇಕ ಮಾಡಿದ್ದಾರೆ. ಸಂಭ್ರಮದಲ್ಲಿದ್ದ ಬೆಂಬಲಿಗರು ಹಾಲಿನ ಅಭಿಷೇಕ ಮಾಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಆಭೂತಪೂರ್ವ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಅವರು ಇಂದು ಚನ್ನಪಟ್ಟಣದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಮತ ಎಣಿಕೆ ಕೇಂದ್ರದಲ್ಲಿ ವಿಜೇತರಾಗಿ ಪ್ರಮಾಣ ಪತ್ರ ಸ್ವೀಕರಿಸಿದರು.
ಗೆಲುವಿನ ನಂತರ ಮಾತನಾಡಿದ ಅವರು, ಮೈತ್ರಿ ಪಕ್ಷದಲ್ಲಿ ಸ್ವಾರ್ಥವಿತ್ತು. ಜನ ಅವರ ಕುಟುಂಬ ರಾಜಕಾರಣಕ್ಕೆ ತೆರೆ ಎಳೆದಿದ್ದಾರೆ, ಜೆಡಿಎಸ್ ಬಿಜೆಪಿ ಮೈತ್ರಿ ವರ್ಕೌಟ್ ಆಗಿಲ್ಲ. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ತಮ್ಮ ಪುತ್ರರನ್ನು ಬೆಳೆಸಬೇಕು ಎಂದು ಹೋರಾಡಿದ್ದರು. ಇವರ ಷಡ್ಯಂತ್ರದಿಂದ ನಾನು ಎನ್‌ಡಿಎ ಪಕ್ಷದಿಂದ ಹೊರಬಂದೆ. ಆದರೆ ಕ್ಷೇತ್ರದ ಜನ ಹಾಗೂ ಕಾಂಗ್ರೆಸ್ ಪಕ್ಷ ನನ್ನನ್ನು ಕೈ ಬಿಡಲಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಕೂಡ ಕ್ಷೇತ್ರದ ಮತದಾರರಿಗೆ ಧನ್ಯವಾದ ಅರ್ಪಿಸಿದೆ.