ಮುಂಬಯಿ: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಜಯ ಗಳಿಸಿದೆ.ಹೀಗಾಗಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಾರೆ.
ಹರಿಯಾಣದ ನಂತರ ಮಹಾರಾಷ್ಟ್ರ ಕೂಡ ‘ಏಕ್ ಹೈ ತೋ ಸೇಫ್ ಹೈ’ ಎಂಬ ಸಂದೇಶ ಕಳುಹಿಸಿದೆ. ಇದು ದೇಶಕ್ಕೆ ಮಹಾಮಂತ್ರವಾಗಿದೆ. ಮತ್ತೊಂದು ಐತಿಹಾಸಿಕ ವಿಜಯವನ್ನು ಆಚರಿಸಲು ನಾವು ಇಲ್ಲಿ ಸೇರಿದ್ದೇವೆ. ಮಹಾರಾಷ್ಟ್ರದಲ್ಲಿ ಇಂದು ಅಭಿವೃದ್ಧಿ ಮತ್ತು ಉತ್ತಮ ಆಡಳಿತ ಗೆದ್ದಿದೆ. ಮಹಾರಾಷ್ಟ್ರದಲ್ಲಿ ಇಂದು ಸತ್ಯವಂತ ಸಮುದಾಯ, ನ್ಯಾಯ ಗೆದ್ದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಜಾತಿ, ಧರ್ಮ, ಭಾಷೆ ಮತ್ತು ಪ್ರದೇಶದ ಹೆಸರಿನಲ್ಲಿ ಚುನಾವಣೆಯಲ್ಲಿ ಹೋರಾಡುವವರಿಗೆ ಮಹಾರಾಷ್ಟ್ರದ ಜನರು ತಕ್ಕ ಪಾಠ ಕಲಿಸಿದ್ದಾರೆ ಮತ್ತು ಶಿಕ್ಷಿಸಿದ್ದಾರೆ. ನಾನು ಏಕನಾಥ್ ಶಿಂಧೆ, ದೇವೇಂದ್ರ ಫಡ್ನವಿಸ್, ಅಜಿತ್ ಪವಾರ್ ಅವರಿಗೂ ನನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ ಎಂದಿದ್ದಾರೆ.
ಭಾರತ ದೇಶ ಅಭಿವೃದ್ಧಿಯನ್ನು ಮಾತ್ರ ಬಯಸುತ್ತದೆ. ಹೀಗಾಗಿ ನಾನು ನಾನು ಭಾರತದ ಪ್ರಜೆಗಳಿಗೆ ತಲೆಬಾಗುತ್ತೇನೆ ಎಂದು ಮೋದಿ ಹೇಳಿದ್ದಾರೆ. ಸತತ 3 ಚುನಾವಣೆಗಳಲ್ಲಿ ಬಿಜೆಪಿಗೆ ಮತ ಹಾಕಿದ 6ನೇ ರಾಜ್ಯ ಮಹಾರಾಷ್ಟ್ರವಾಗಿದೆ. ಗೋವಾ, ಛತ್ತೀಸ್‌ಗಢ ಮತ್ತು ಬಿಹಾರದಲ್ಲಿ ಎನ್‌ಡಿಎ ಸತತ 3 ಬಾರಿ ಜನಾದೇಶ ಸ್ವೀಕರಿಸಿದೆ. ಮಹಾರಾಷ್ಟ್ರದಲ್ಲಿ 50 ವರ್ಷಗಳ ನಂತರ ದಾಖಲೆಯ ಗೆಲುವು ಸಿಕ್ಕಿದೆ. ಮಹಾರಾಷ್ಟ್ರದಲ್ಲಿ ಸತತ 3ನೇ ಬಾರಿಗೆ ಎನ್‌ಡಿಎ ಮೈತ್ರಿಕೂಟಕ್ಕೆ ಗೆಲುವಾಗಿದೆ ಎಂದಿದ್ದಾರೆ.