ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಹೊರ ಬಿದ್ದಿದ್ದು, ದೊಡ್ಡ ಅನಾಹುತ ತಪ್ಪಿದಂತಾಗಿದೆ.
ನಿನ್ನೆ ಚುನಾವಣೆ ಪ್ರಚಾರ ಶುರುವಾಗುತ್ತಿದ್ದಂತೆ ಬಿಜೆಪಿ ಬೆಂಬಲಿತ ಬಂಡಾಯ ಅಭ್ಯರ್ಥಿಯ ಪರ ಅಭಿಮಾನಿಗಳು ಮೆರವಣಿಗೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಚಾಂದ್ ಗಡ್ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ಶಿವಾಜಿ ಪಾಟೀಲ್ ಅವರ ವಿಜಯೋತ್ಸವನ್ನು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಆಚರಿಸುತ್ತಿದ್ದರು. ಈ ವೇಳೆ ಮಹಿಳೆಯರು ಆರತಿ ಮಾಡಲು ಮುಂದಾಗಿದ್ದಾರೆ. ಆಗ ಜೆಸಿಬಿ ಮೂಲಕ ಅಭಿಮಾನಿಗಳು ಬಣ್ಣ ಎರಚಲು ಮುಂದಾಗಿದ್ದಾರೆ. ಈ ವೇಳೆ ಬೆಂಕಿ ಹೊತ್ತಿಕೊಂಡಿದ್ದು, ನೂತನ ಶಾಸಕರು ಸೇರಿದಂತೆ ಕನಿಷ್ಠ 34 ಜನರು ಗಾಯಗೊಂಡಿದ್ದಾರೆ.
ಮಹಾರಾಷ್ಟ್ರದ ಚಂದಗಡದಿಂದ ಶಿವಾಜಿ ಪಾಟೀಲ್ 24,134 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮಹಾರಾಷ್ಟ್ರದಲ್ಲಿ 230ಕ್ಕೂ ಅಧಿಕ ಸ್ಥಾನಗಳನ್ನು ಬಿಜೆಪಿ ನೇತೃತ್ವದ ಮಹಾಯುತಿ ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ 130 ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ.
ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ) ಮತ್ತು ಎನ್‌ಸಿಪಿ (ಶರದ್ ಪವಾರ್) ಒಳಗೊಂಡ ಮಹಾವಿಕಾಸ್ ಅಘಾಡಿ ಕ್ರಮವಾಗಿ 16, 20 ಮತ್ತು 10 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.