ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಆತ್ಮವಿಶ್ವಾಸದಲ್ಲಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಆಘಾತವಾಗಿದೆ. ಚುನಾವಣೆಯಲ್ಲಿ ಅವರ ಮಗ ನಿಖಿಲ್ ಕುಮಾರಸ್ವಾಮಿ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಸಹಜವಾಗಿ ಜೆಡಿಎಸ್ ಪಾಳಯದಲ್ಲಿ ಬೇಸರ ಮನೆ ಮಾಡಿದ್ದು, ಈ ವಿಷಯವಾಗಿ ಕೇಂದ್ರ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಫಲಿತಾಂಶ ಬಂದಾಗಿದೆ. ಈ ವೇಳೆ ಏನು ಚರ್ಚೆ ಮಾಡಿದರೂ ನಡೆಯುವುದಿಲ್ಲ. ಜನಾದೇಶ ಒಪ್ಪಿಕೊಳ್ಳಬೇಕಿದೆ. ಏನೇ ಇದ್ದರೂ ಮುಂದೆ ಮಾತನಾಡುತ್ತೇನೆ ಎಂದು ಬೇಸರದಿಂದ ನುಡಿದಿದ್ದಾರೆ.
ಕುಮಾರಸ್ವಾಮಿ ಅವರು ನಿನ್ನೆಯಿಂದಲೂ ಮನೆಯಿಂದ ಹೊರಗೆ ಬಂದಿರಲಿಲ್ಲ. ಆದರೆ, ನಾಳೆಯಿಂದ ಚಳಿಗಾಲದ ಸಂಸತ್ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.