ಬೆಂಗಳೂರು: ಆ ಸಮುದಾಯವನ್ನು ನಾವು ಎಷ್ಟೇ ವಿಶ್ವಾಸಕ್ಕೆ ತೆಗೆದುಕೊಳ್ಳಲು ಯತ್ನಿಸಿದರೂ ಅವರು ನಮ್ಮ ಅವಶ್ಯಕತೆ ಇಲ್ಲ ಎಂಬ ಸಂದೇಶ ನೀಡಿದ್ದಾರೆ. ಮಾಜಿ ಪ್ರಧಾನಿಗಳಾದ ದೇವೇಗೌಡರು ಆ ಸಮುದಾಯದ ಮೀಸಲಾತಿ ನೀಡಿದ್ದರು. ಈ ಚುನಾವಣೆಯಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕೆಂಬ ಪ್ರಯತ್ನ ವಿಫಲವಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷಕ್ಕೆ ಕ್ಷೇತ್ರದಲ್ಲಿ ಸಾಂಪ್ರದಾಯಿಕ 60 ಸಾವಿರ ಮತಗಳಿವೆ. ಆದರೆ, ಈ ಬಾರಿ ಮತಗಳ ಸಂಖ್ಯೆ 87 ಸಾವಿರಕ್ಕೆ ಏರಿಕೆಯಾಗಿದೆ. ಅಲ್ಲಿನ ಜನರು ನಮ್ಮನ್ನು ಕೈ ಬಿಟ್ಟಿಲ್ಲ ಎಂದಿದ್ದಾರೆ.
ದೇವೇಗೌಡರಿಗೆ ರಾಜಕೀಯ ಸಾಕು ಎಂದಿದ್ದ ಯೋಗೇಶ್ವರ್ ಮಾತಿಗೆ ಪ್ರತಿಕ್ರಿಯೆ ನೀಡಿದ ನಿಖಿಲ್, ದೇವೇಗೌಡ ಅವರು ಅಧಿಕಾರಕ್ಕಾಗಿ ರಾಜಕಾರಣ ಮಾಡುವುದಿಲ್ಲ. ಅವರು ಜನರಿಗಾಗಿ ಇಳಿ ವಯಸ್ಸಿನಲ್ಲೂ ಹೋರಾಟ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಅವರು ಕೂಡ ಅವರ ರಾಜಕಾರಣ ಬೇಕು ಎಂದಿದ್ದಾರೆ ಎಂದು ಹೇಳಿದ್ದಾರೆ.
ಜಿ.ಟಿ.ದೇವೇಗೌಡ ಅವರು ಹಿರಿಯರು, ಅವರು ಯಾವ ಅರ್ಥದಲ್ಲಿ ಮಾತಾಡಿದ್ದಾರೋ ಗೊತ್ತಿಲ್ಲ. ಅವರು ನಮ್ಮ ಪಕ್ಷದ ಕೋರ್ ಕಮಿಟಿ ನಾಯಕರು, ಅವರಿಗೆ ಯಾವ ಗೌರವ ನೀಡಬೇಕು. ನಾನು ನೀಡುತ್ತೇನೆ ಎಂದಿದ್ದಾರೆ.