ನಟ ಅಲ್ಲು ಅರ್ಜನ್ ನಟನೆಯ ಪುಷ್ಪ 2 ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಡಿ. 5ರಂದು ಚಿತ್ರ ಬಿಡುಗಡೆಯಾಗಲಿದ್ದು, ಈಗಾಗಲೇ ಟೈಟಲ್ ಸಾಂಗ್ ಬಿಡುಗಡೆಯಾಗಿತ್ತು. ಈಗ ಮತ್ತೊಂದು ಹಾಡು ಬಿಡುಗಡೆಯಾಗಿದೆ.
ಈ ಹಾಡಿನಲ್ಲಿ ನಟ ಅಲ್ಲು ಅರ್ಜುನ್ ಅವರು ನಟಿ ಶ್ರೀಲೀಲಾ ಜೊತೆ ಬಿಂದಾಸ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ‘ಕಿಸಿಕ್..’ ಹಾಡಿನ ಅಬ್ಬರ ಜೋರಾಗಿದೆ. ಎಲ್ಲ ಕಡೆಗಳಲ್ಲಿ ಈ ಹಾಡು ಟ್ರೆಂಡ್ ಆಗುತ್ತಿದೆ. ‘ಪುಷ್ಪ 2’ ಚಿತ್ರಕ್ಕೆ ದೇವಿ ಶ್ರೀಪ್ರಸಾದ್ ಅವರು ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆಯಾಗಿದೆ.
‘ಕಿಸಿಕ್..’ ಹಾಡನ್ನು ಅದ್ದೂರಿಯಾಗಿ ಚಿತ್ರಿಸಲಾಗಿದೆ. ‘ಪುಷ್ಪ’ ಸಿನಿಮಾದಲ್ಲಿ ಸಮಂತಾ ರುತ್ ಪ್ರಭು ಅವರು ಐಟಂ ಡ್ಯಾನ್ಸ್ ಮಾಡಿದ್ದರು. ಈಗ ಸೀಕ್ವೆಲ್ ನಲ್ಲಿ ಶ್ರೀಲೀಲಾ ಅವರು ಹೆಜ್ಜೆ ಹಾಕಿದ್ದಾರೆ. ಹಾಡಿಗೆ ಉತ್ತಮ ಸ್ಪಂದನೆ ಸಿಗುತ್ತಿದೆ.
ಕಿಸಿಕ್’ ಹಾಡಿಗೆ ಖ್ಯಾತ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಅವರು ಕೊರಿಯೋಗ್ರಫಿ ಮಾಡಿದ್ದಾರೆ. ಚಿತ್ರಮಂದಿರದಲ್ಲಿ ಪೂರ್ತಿ ಸಾಂಗ್ ನೋಡಲು ಅಭಿಮಾನಿಗಳು ಕಾದಿದ್ದಾರೆ.