ಕರ್ನಾಟಕ ಲೋಕಸೇವಾ ಆಯೋಗದಿಂದ ಕಾಲಿ ಇರುವ 750 ಭೂ ಮಾಪಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಹೆಸರು : ಲ್ಯಾಂಡ್ ಸರ್ವೇಯರ್ (ಹೆಚ್ ಕೆ ) – 190 ಹಾಗೂ ಲ್ಯಾಂಡ್ ಸರ್ವೇಯರ್ (ಆರ್ ಪಿಸಿ ) – 560 ಸೇರಿದಂತೆ ಒಟ್ಟು 750 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಐಟಿಐ, ಪಿಯುಸಿ, ಡಿಪ್ಲೊಮಾ, ಬಿಇ ಅಥವಾ ಬಿ. ಟೆಕ್ ಸಿವಿಲ್ ಇಂಜಿನಿಯರಿಂಗ್ ನ್ನು ಪೂರ್ಣಗೊಳಿಸಿರಬೇಕು.
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 38 ವರ್ಷಗಳನ್ನು ಮೀರಿರಬಾರದು. ಅದಲ್ಲದೇ, ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ವರ್ಷ, ಎಸ್ ಸಿ /ಎಸ್ ಟಿ /ಪ್ರವರ್ಗ-1 ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಅಂಗವಿಕಲ /ವಿಧವೆ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಎರಡು ಪತ್ರಿಕೆಗಳ ಪರೀಕ್ಷೆಗಳು ಇರಲಿವೆ. ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು. ನ. 25 ಅರ್ಜಿ ಸಲ್ಲಿಸಲು ಆರಂಭಿಕ ದಿನವಾಗಿದ್ದು, ಡಿ. 9ರ ವರೆಗೆ ಅರ್ಜಿ ಸಲ್ಲಿಸಬಹುದು.