ಮೈಸೂರು: ಮಾಜಿ ಪ್ರಧಾನಿ ದೇವೆಗೌಡ ಅವರು ನನ್ನನ್ನು ಉಪಚುನಾವಣೆ ಪ್ರಚಾರಕ್ಕೆ ಕರೆದಿದ್ದೇನೆ ಎಂದು ಹೇಳಿದರೆ, ನಾನು ಅಂದೇ ರಾಜಕಾರಣ ಬಿಡುತ್ತೇನೆ ಎಂದು ಜಿ ಟಿ ದೇವೆಗೌಡ ಅವರು ಸಾ.ರಾ. ಮಹೇಶ್ ಗೆ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾ ರಾ ಮಹೇಶ್ ಸುಮ್ಮನೆ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ಸುಳ್ಳು ಹೇಳಿಕೊಂಡು ಚಾಮುಂಡಿಬೆಟ್ಟಕ್ಕೆ ಬಾ, ಅಲ್ಲಿಗೆ ಬಾ ಅಂದರೆ ಹೋಗಲು ಆಗುತ್ತದೆಯಾ? ಈ ಹಿಂದೆ ವಿಶ್ವನಾಥ್ ಜೊತೆ ಚಾಮುಂಡಿಬೆಟ್ಟಕ್ಕೆ ಹೋಗಿ ಅವರ ಕಥೆ ಏನಾಯಿತು? ನಾನು ಹೇಳುತ್ತಿರುವುದು ಸತ್ಯ. ನಾನು ತಪ್ಪು ಮಾಡಿದ್ದರೆ ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಳ್ಳುತ್ತೇನೆ. ಒಂದು ಬಾರಿ ಯಾವುದೋ ತಪ್ಪು ಮಾಡಿದ್ದೆ. ಅಂದು ಸಂಜೆಯೆ ನನ್ನ ತಾಯಿ ಬಳಿ ಹೋಗಿ ತಪ್ಪು ಒಪ್ಪುಕೊಂಡಿದ್ದೆ. ನಾನು ಯಾವುದಕ್ಕೂ ಹೆದರುವುದಿಲ್ಲ ಎಂದು ಗುಡುಗಿದ್ದಾರೆ.
ಜೆಡಿಎಸ್ ನಲ್ಲಿ ನೋವು ನನಗೆ ಹೊಸದಲ್ಲ. ನನಗೆ ಹಲವು ಬಾರಿ ಜೆಡಿಎಸ್ ನಲ್ಲಿ ಇಂತಹ ನೋವು ಉಂಟಾಗಿದೆ. ಈಗಲೂ ಮತ್ತೊಂದು ನೋವು ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.