ಬೆಂಗಳೂರು: ಮುಡಾ ನಿವೇಶನಗಳನ್ನು ಅಕ್ರಮವಾಗಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆಯನ್ನು ಡಿ.10ಕ್ಕೆ ಮುಂದೂಡಿದೆ.
ಆರೋಪಿ ದೇವರಾಜು ಪರ ವಕೀಲರು ವಾದ ಮಂಡಿಸಿ, ವಿಭಾಗೀಯ ಪೀಠದಲ್ಲಿ ಡಿ.5 ಕ್ಕೆ ವಿಚಾರಣೆ ಬಾಕಿ ಇದೆ. ಹೀಗಾಗಿ ವಿಭಾಗೀಯ ಪೀಠದಲ್ಲಿ ವಿಚಾರಣೆ ಮುಕ್ತಾಯದ ನಂತರ ಇಲ್ಲಿ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು. ಇದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲ ಆಕ್ಷೇಪ ವ್ಯಕ್ತಪಡಿಸಿದರು. ಆದರೆ, ಕೋರ್ಟ್ ವಿಚಾರಣೆಯನ್ನು ಡಿ. 10ಕ್ಕೆ ಮುಂದೂಡಿದೆ.
ಆ ಅರ್ಜಿ ಸಂದರ್ಭದಲ್ಲಿ ಇದನ್ನು ಮುಂದೂಡಬೇಕು ಅಂತ ಹೇಳಿಲ್ಲ ಎಂದು ಸ್ನೇಹಮಯಿ ಕೃಷ್ಣ ಪರ ವಕೀಲ ರಾಘವನ್ ವಾದಿಸಿದರು.
ಇಂದು ಲೋಕಾಯುಕ್ತ ವರದಿ ಪಡೆಯಿರಿ ಎಂದು ರಾಘವನ್ ಮನವಿ ಮಾಡಿದರು. ನ್ಯಾಯಾಧೀಶರು, ಇವತ್ತು ಅರ್ಜಿ ವಿಚಾರಣೆ ನಡುತ್ತಿಲ್ಲ. ಹೀಗಾಗಿ ಡಿ.10 ಕ್ಕೆ ಮುಂದೂಡಲಾಗುವುದು ಎಂದು ಆದೇಶಿಸಿದ್ದಾರೆ.