ಕಲಬುರಗಿ: ವಕ್ಪ್ ವಿರುದ್ಧ ಶಾಸಕ ಯತ್ನಾಳ್ ಹಾಗೂ ಮಿತ್ರ ತಂಡ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಯತ್ನಾಳ್ ಮತ್ತೊಮ್ಮೆ ವಿಜಯೇಂದ್ರ ವಿರುದ್ಧ ಗುಡುಗಿದ್ದಾರೆ.
ಈಗಾಗಲೇ ಬಿಜೆಪಿ ನಾಯಕರು ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹೋರಾಟಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ. ಬೀದರ್ ಜಿಲ್ಲಾಧ್ಯಕ್ಷ ಪೊಲೀಸರಿಗೆ ದೂರು ಕೂಡ ನೀಡಿದ್ದರು.
ಕಲಬುರಗಿಯಲ್ಲಿ ಮಾತನಾಡಿದ ಯತ್ನಾಳ್, ಕಲಬುರಗಿಯಲ್ಲಿ ನಮ್ಮ ಪಕ್ಷದ ಬಹಳಷ್ಟು ಮುಖಂಡರು ಬಂದಿಲ್ಲ. ಮುಂದೆ ಒಬ್ಬಬ್ಬರಾಗಿ ಬರುತ್ತಾರೆ. ಮುಂದೆ ಟಿಕೆಟ್ ಕೊಡುವ ಅಧಿಕಾರ ನಮಗೆ ಬರುತ್ತದೆ. ಹೈಕಮಾಂಡ್ ಗೆ ನನ್ನ ವಿರುದ್ದ ಪತ್ರ ಬರೆಯುತ್ತಿರುವುದು ಹೊಸದೇನೂ ಅಲ್ಲ. ನನ್ನ ವಿರುದ್ದ ನೀಡಿರುವ ದೂರುಗಳೇ ಒಂದು ರೂಮ್ ತುಂಬಿವೆ. ಆದರೆ, ನಾನು ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ.
ಬಿ.ವೈ.ವಿಜಯೇಂದ್ರ ಹೋರಾಟನೇ ಮಾಡಲ್ಲ. ವಿಜಯೇಂದ್ರ ವಕ್ಫ್ ವಿರುದ್ಧ ಎಲ್ಲಿ ಹೋರಾಟ ಮಾಡಿದ್ದಾನೆ? ಯಾವ ಹಳ್ಳಿಗೆ ಹೋಗಿ ರೈತರ ಮನವಿ ಸ್ವೀಕರಿಸಿದ್ದಾನೆ? ರಾತ್ರಿಯಾದ್ರೆ ಸಾಕು ಡಿಕೆ-ಸಿದ್ದರಾಮಯ್ಯ ಮನೆಯಲ್ಲಿ ಇರುತ್ತಾರೆ. ಅವರು ಎಲ್ಲಿ ರೈತರ ಪರವಾಗಿ ಹೋರಾಟ ಮಾಡ್ತಾರೆ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ನೂರೆಂಟು ಕೇಸ್ ಇದೆ. ಕಾಪಾಡೋ ಶಿವಪ್ಪ ಅಂತಾ ಡಿಸಿಎಂ ಡಿಕೆ ಮನೆಯಲ್ಲಿ ಇರ್ತಾರೆ. ಕಾಪಾಡೋ ಸಿದ್ದರಾಮಯ್ಯ ಅಂತಾ ಅವರ ಮನೆಯಲ್ಲಿ ಇರ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ಯತ್ನಾಳ್ ಟೀಮ್ ಅಭಿಯಾನ ಮುಂದುವರಿಯುತ್ತಿದ್ದಂತೆಯೇ ಇತ್ತ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಎಚ್ಚರಿಕೆ ನೀಡಿದ್ದಾರೆ.