ಬೆಂಗಳೂರು: ಪ್ರಿಯಕರನೊಬ್ಬ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಇಲ್ಲಿಯ ಇಂದಿರಾ ನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ. ಅಸ್ಸಾಂ ಮೂಲದ ಮಾಯಾ ಗೊಗೋಯ್ ಹತ್ಯೆಯಾಗಿರುವ ಯುವತಿ. ಹತ್ಯೆಯಾದ ಯುವತಿ ನಗರದಲ್ಲಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರು ಹೆಚ್ಎಸ್ಆರ್ ಲೇಔಟ್ನಲ್ಲಿ ವಾಸಿಸುತ್ತಿದ್ದರು.
ನ. 23ರಂದು ಮಾಯಾ ಹಾಗೂ ಆಕೆಯ ಪ್ರಿಯಕರ ಆರವ್ ಹಾರ್ನಿ ಇಂದಿರಾನಗರದ ಅಪಾರ್ಟ್ ಮೆಂಟ್ ನಲ್ಲಿ ರೂಮ್ ಪಡೆದು ಉಳಿದಿದ್ದರು. ಆದರೆ, ಇಂದು ಬೆಳಗ್ಗೆ ಯುವಕ ಮಾತ್ರ ಕ್ಯಾಬ್ ಬುಕ್ ಮಾಡಿಕೊಂಡು ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಇದನ್ನು ಹೋಟೆಲ್ ಸಿಬ್ಬಂದಿ ಗಮನಿಸಿದಾಗ ಹತ್ಯೆಯ ವಿಚಾರ ಬಯಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಿಯಕರನ ಮೇಲೆ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.