ನವದೆಹಲಿ: ಹತ್ತನೇ ತರಗತಿಯ ಅರ್ಧವಾರ್ಷಿಕ ಪರೀಕ್ಷೆಯ ಮೌಲ್ಯಮಾಪನಕ್ಕೆ ಅವಕಾಶ ಪಡೆಯಲು ಸರ್ಕಾರದ ಪ್ರಯತ್ನವನ್ನು ಕೋರ್ಟ್ ವಿಫಲಗೊಳಿಸಿದೆ.
ಅಕ್ಟೋಬರ್ 21ರಂದು ನೀಡಿದ್ದ ತನ್ನ ಆದೇಶವನ್ನು ಮಾರ್ಪಡಿಸುವಂತೆ ಕರ್ನಾಟಕ ಸರ್ಕಾರ ಮಾಡಿಕೊಂಡ ಮನವಿಯನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಸುಪ್ರೀಂ ನ್ಯಾಯಪೀಠ ಈ ತೀರ್ಪು ನೀಡಿದೆ.
2024-25ರ ಶೈಕ್ಷಣಿಕ ವರ್ಷದ 10ನೇ ತರಗತಿಗೆ ಅರ್ಧವಾರ್ಷಿಕ ಪರೀಕ್ಷೆ ಈಗಾಗಲೇ ನಡೆಸಲಾಗಿದೆ. ಅದರ ಮೌಲ್ಯಾಂಕಗಳನ್ನು ಪ್ರಕಟಿಸಲು ಸುಪ್ರೀಂಕೋರ್ಟ್ ತಡೆ ಹಿಡಿದಿದೆ. ಈ ಮೌಲ್ಯಾಂಕಗಳಿಂದ ಹತ್ತನೇ ತರಗತಿಯ ಒಟ್ಟಾರೆ ಫಲಿತಾಂಶದ ಮೇಲೆ ಏನೂ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ರಾಜ್ಯ ಸರ್ಕಾರವು ಕಳೆದ ವರ್ಷದ ಅಕ್ಟೋಬ್ನಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿತ್ತು. ಹೈಕೋರ್ಟ್ನ ಏಕಸದಸ್ಯ ನ್ಯಾಯಪೀಠವು 2024ರ ಮಾರ್ಚ್ 6ರಂದು ರಾಜ್ಯ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿತ್ತು.
ಅನುದಾನರಹಿತ ಶಾಲೆಗಳು ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆಹೋಗಿದ್ದವು. ಅಕ್ಟೋಬರ್ 21ರಂದು ಸುಪ್ರೀಂಕೋರ್ಟ್ ನ್ಯಾಯಪೀಠವು ಮುಂದಿನ ಆದೇಶ ಬರುವವರೆಗೂ 8, 9 ಮತ್ತು 10ನೇ ತರಗತಿ ಅರ್ಧವಾರ್ಷಿಕ ಪರೀಕ್ಷೆ ನಡೆಸದಂತೆ ಮತ್ತು ಫಲಿತಾಂಶ ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ಬಂಧಿಸಿತ್ತ.