ಖಾಸಗಿ ವೈದ್ಯರಿಗೆ ಆರೋಗ್ಯ ಇಲಾಖೆ ಬಂಪರ್ ಆಫರ್ ನೀಡಿದೆ. ಆರೋಗ್ಯ ಇಲಾಖೆಯು ಮಾಸಿಕ ಎರಡು ಲಕ್ಷ ವೇತನ ನೀಡಿ ಜಿಲ್ಲಾ ಅಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ನೇಮಕ ಮಾಡುವ ಆಫರ್ ನ್ನು ಇಲಾಖೆ ನೀಡಿದೆ.
ಈ ಮೂಲಕ ರಾಜ್ಯದಲ್ಲಿ ವೈದ್ಯರ ಕೊರತೆ ನೀಗಿಸಿಲು ಆರೋಗ್ಯ ಇಲಾಖೆ ನಿರ್ಧರಿಸಿದ್ದು, ಈ ಆಫರ್ ನೀಡಿ, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಹೊಸದಾಗಿ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಇಲಾಖೆ ಮುಂದಾಗಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಕ್ಷೇತ್ರದಲ್ಲಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ಸೂಚಿಸಿದ್ದಾರೆ. ಹೀಗಾಗಿ ಸಚಿವರ ಸೂಚನೆಯ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ವೈದ್ಯರ ನೇಮಕಕ್ಕೆ ಮುಂದಾಗಿದೆ.
ಈಗಾಗಲೇ ರಾಜ್ಯದ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಕಾಡುತ್ತಿದ್ದು, ಬಡ ರೋಗಿಗಳಿಗೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸಬೇಕು. ಹೀಗಾಗಿ ಆಸ್ಪತ್ರೆಗಳಲ್ಲಿ ಕಾಡುತ್ತಿರುವ ವೈದ್ಯರ ಕೊರತೆ ನೀಗಿಸಬೇಕು ಎಂದು ಮನವಿ ಮಾಡಿದ್ದಾರೆ.