ಚಾಂಪಿಯನ್ಸ್ ಟ್ರೋಫಿ ಆಯೋಜನೆಯ ಹಕ್ಕನ್ನು ಐಸಿಯು ಈಗಾಗಲೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಗೆ ವಹಿಸಿದೆ. ಆದರೆ, ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಮಾತ್ರ ಮೊಂಡುತನ ಪ್ರದರ್ಶಿಸುತ್ತಿದ್ದು, ಈಗ ತಾನೇ ಬಲಿಪಶುವಾಗಬಹುದು ಎನ್ನಲಾಗಿದೆ.
ಭಾರತ ತಂಡವು ಈಗಾಗಲೇ ಪಾಕಿಸ್ತಾನ್ ಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟವಾಗಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ್ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ಮುಂದಾಗುತ್ತಿಲ್ಲ. ಐಸಿಸಿ ಕೂಡ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ಸೂಚನೆ ನೀಡಿದೆ. ಒಂದು ವೇಳೆ ಈ ಆಯ್ಕೆಯನ್ನು ಒಪ್ಪಿಕೊಳ್ಳದಿದ್ದರೆ ಟೂರ್ನಿಯಿಂದ ಹೊರಗುಳಿಯುವಂತೆ ಐಸಿಸಿ ಖಡಕ್ ಆಗಿ ಸೂಚಿಸಿದೆ ಎಂದು ತಿಳಿದು ಬಂದಿದೆ.
ಪಿಟಿಐ ವರದಿಯಂತೆ, ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸುವುದು ಸೂಕ್ತ ಎಂದು ಐಸಿಸಿ ಅಭಿಪ್ರಾಯಟ್ಟಿದೆ. ಆದರೆ, ಎರಡು ದೇಶಗಳಲ್ಲಿ ಟೂರ್ನಿಯನ್ನು ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಸಿದ್ಧವಿಲ್ಲ. ಉಳಿದೆಲ್ಲ ಕ್ರಿಕೆಟ್ ಮಂಡಳಿಗಳು ಹೈಬ್ರಿಡ್ ಮಾದರಿಗೆ ಸಮ್ಮತಿ ಸೂಚಿಸಿದರೂ ಪಿಸಿಬಿ ಮಾತ್ರ ತನ್ನ ನಿಲುವು ಬದಲಿಸಿಲ್ಲ. ಹೀಗಾಗಿಯೇ ಪಾಕಿಸ್ತಾನ್ ತಂಡವನ್ನೇ ಟೂರ್ನಿಯಿಂದ ಹೊರಗಿಟ್ಟು ದಕ್ಷಿಣ ಆಫ್ರಿಕಾ ಅಥವಾ ಭಾರತದಲ್ಲಿ ಚಾಂಪಿಯನ್ಸ್ ಟ್ರೋಫಿ ಆಯೋಜಿಸುವ ಕುರಿತು ಐಸಿಸಿ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.
ಹೀಗಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಈಗ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜನೆ ಮಾಡಲೇಬೇಕಾಗಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಪಾಕಿಸ್ತಾನ್ ಮತ್ತು ಯುಎಇ ನಲ್ಲಿ ನಡೆಯುವ ಸಾಧ್ಯತೆ ಹೆಚ್ಚಿದೆ. ಇಲ್ಲಿ ಟೂರ್ನಿಯ ಬಹುತೇಕ ಪಂದ್ಯಗಳು ಪಾಕಿಸ್ತಾನದಲ್ಲೇ ನಡೆಯಲಿದೆ. ಒಂದು ವೇಳೆ ಪಾಕ್ ಇದಕ್ಕೆ ಒಪ್ಪಿಗೆ ಸೂಚಿಸದಿದ್ದರೆ, ಚಾಂಪಿಯನ್ಸ್ ಟ್ರೋಫಿ ಬೇರೆ ದೇಶಕ್ಕೆ ವರ್ಗಾವಣೆಯಾಗುವ ಸಾಧ್ಯತೆ ಇದೆ.