ಕನ್ನಡದ ಕಿರುತೆರೆ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆಂಬ ಸುದ್ದಿ ವೈರಲ್ ಆಗಿದೆ.
ಇತ್ತೀಚೆಗೆ ಕನ್ನಡ ಕಿರುತೆರೆಯಲ್ಲಿ ಭಾರೀ ಸದ್ದು ಮಾಡಿದ್ದ ಬ್ರಹ್ಮಗಂಟು ಧಾರಾವಾಹಿಯಲ್ಲಿ ಶೋಭಿತಾ ನಟಿಸಿ ಮನೆ ಮಾತಾಗಿದ್ದರು. ಅಲ್ಲದೇ, ಅವರು ಒಂದ್ ಕಥೆ ಹೇಳಾ, ಎರಡೊಂದ್ಲಾ ಮೂರು ಸಿನಿಮಾ ಸೇರಿದಂತೆ ಕೆಲವು ಚಿತ್ರಗಳಲ್ಲಿ ಕೂಡ ನಟಿಸಿದ್ದರು. ಶೋಭಿತಾ ಅವರು ಹೈದಾರಾಬಾದ್ ನಲ್ಲಿ ಪತಿಯೊಂದಿಗೆ ವಾಸಿಸುತ್ತಿದ್ದರು. ಇವರು ಕರ್ನಾಟಕ ಮೂಲದವರಾಗಿದ್ದು, ಹಾಸನ ಜಿಲ್ಲೆಯ ಸಕಲೇಶಪುರದವರು ಎನ್ನಲಾಗಿದೆ.
ಆದರೆ, ಇತ್ತೀಚೆಗೆ ಸಿನಿಮಾ ಹಾಗೂ ಕಿರುತೆರೆಯಲ್ಲಿ ನಟಿಸುವುದನ್ನು ಕಡಿಮೆ ಮಾಡಿದ್ದರು. ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದ್ದು, ಸಾವಿಗೆ ನಿಖರ ಕಾರಣ ಮಾತ್ರ ಗೊತ್ತಾಗಿಲ್ಲ. ಶೋಭಿತಾ ನಿಧನಕ್ಕೆ ಸೆಲೆಬ್ರಿಟಿಗಳು ಸೇರಿದಂತೆ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.