ಬೆಂಗಳೂರು: ರಾಜ್ಯಕ್ಕೂ ಫೆಂಗಲ್ ಚಂಡಮಾರುತದ ಆತಂಕ ಶುರುವಾಗಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಾಳೆ ಕೋಲಾರ ಜಿಲ್ಲೆಯಲ್ಲಿ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಹಾಗೂ ವಾತಾವರಣ ತುಂಬಾ ತಂಪಾಗಿರುವ ಹಿನ್ನೆಲೆಯಲ್ಲಿ ನಾಳೆ ಒಂದು ದಿನ ರಜೆ ಘೋಷಿಸಲಾಗಿದೆ. ರಜೆ ಘೋಷಿಸಿ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆದೇಶ ಹೊರಡಿಸಿದ್ದಾರೆ. ನಾಳೆಯ ರಜೆಯನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಲು ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ತಂಪಾದ ವಾತಾವರಣದ ಮಧ್ಯೆ ಚಳಿಯ ಅನುಭವ ಕೂಡ ಹೆಚ್ಚಾಗಿದೆ. ನಾಳೆ ಮತ್ತು ನಾಡಿದ್ದು ಮಳೆಯ ಮುನ್ಸೂಚನೆ ಇದೆ. ಅಲ್ಲದೇ, ಹಲವು ಜಿಲ್ಲೆಗಳಲ್ಲಿ ಕೂಡ ಮಳೆಯ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಯಾವುದೇ ರಜೆ ಇಲ್ಲ ಎಂದು ಈಗಾಗಲೇ ಜಿಲ್ಲಾಧಿಕಾರಿ ತಿಳಿಸಿದ್ದಾರೆ.