ಬೆಂಗಳೂರು: ಬಳ್ಳಾರಿಯ ಬಿಮ್ಸ್ ನಲ್ಲಿ ಬಾಣಂತಿಯರು ಸಾವನ್ನಪ್ಪುತ್ತಿರುವ ಪ್ರಕರಣಕ್ಕೆ ಸರ್ಕಾರ ತೀವ್ರ ಕೆಂಡಾಮಂಡಲವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತನಿಖೆಗೆ ಸೂಚಿಸಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಕೂಡ ಈ ಕುರಿತು ಚರ್ಚೆ ನಡೆಯಿತು. ‘ನನ್ನ ಸರ್ಕಾರದಲ್ಲಿ ಇಂಥದ್ದಕ್ಕೆಲ್ಲ ಅವಕಾಶವಿಲ್ಲ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಬಳ್ಳಾರಿ ಪ್ರಕರಣದಲ್ಲಿ ಯಾರು ತಪ್ಪು ಮಾಡಿದ್ದಾರೆಯೋ ಅವರ ವಿರುದ್ಧ ಮುಲಾಜಿಲ್ಲದೆ ತಕ್ಷಣ ಕ್ರಮ ಕೈಗೊಳ್ಳಬೇಕು. ನನ್ನ ಸರ್ಕಾರದ ಅವಧಿ ಇರುವವರೆಗೂ ಇಂತಹ ಘಟನೆಗಳಿಗೆ ಅವಕಾಶವಿಲ್ಲ ಎಂದು ಕೆಂಡಾಮಂಡಲವಾಗಿದ್ದಾರೆ.
ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯ ನಂತರ ನೀಡಲಾಗಿದ್ದ ಐವಿ ದ್ರಾವಣದಿಂದಾಗಿ ನಾಲ್ವರು ಬಾಣಂತಿಯರು ಕೆಲವು ದಿನಗಳ ಹಿಂದೆ ಸಾವನ್ನಪ್ಪಿದ್ದರು. ಈಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ಹೀಗಾಗಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.