ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ದೊಡ್ಡ ಸದ್ದು ಮಾಡುತ್ತಿದೆ. ಮುಡಾದ ಕರ್ಮಕಾಂಡಗಳು ದಿನಕ್ಕೊಂದು ಹೊರಗೆ ಬರುತ್ತಿವೆ. ಈಗ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ.
ನಗರದ ವಿಜಯನಗರದಲ್ಲಿ ಸುಮಾರು ಒಂದು ಕೋಟಿ ರೂಪಾಯಿಗೂ ಅಧಿಕ ಬೆಲೆಬಾಳುವ 23 ನಿವೇಶನಗಳನ್ನು ಕೇವಲ 3 ಸಾವಿರ ರೂ.ಗೆ ಮಾರಾಟ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಕೃತ್ಯದಿಂದಾಗಿ ಸರ್ಕಾರಕ್ಕೆ ಬರೋಬ್ಬರಿ 300 ಕೋಟಿ ರೂ. ಗೂ ಅಧಿಕ ನಷ್ಟವಾಗಿದೆ.
ಮುಡಾ ಮಾಜಿ ಆಯುಕ್ತ ದಿನೇಶ್ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಕಾರ್ತಿಕ ಬಡಾವಣೆಯ ಮಂಜುನಾಥ್ ಎಂಬಾತನಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಮಾಜಿ ಆಯುಕ್ತ ದಿನೇಶ್ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ಗೆ ಪ್ರೋತ್ಸಾಹದಾಯಕ ಯೋಜನೆ ಹೆಸರಿನಲ್ಲಿ ಐದೇ ದಿನಗಳಲ್ಲಿ ಒಂದು ನಿವೇಶನಕ್ಕೆ 3 ಸಾವಿರ ರೂ. ನಂತೆ ಬರೋಬ್ಬರಿ 23 ಸೈಟ್ ಗಳನ್ನು ನೀಡಿದ್ದಾನೆ ಎನ್ನಲಾಗಿದೆ.
ಕ್ರಯ ಪತ್ರದಲ್ಲಿ ಮಂಜುನಾಥ್ ಯಾವ ಭೂಮಿ ಕಳೆದುಕೊಂಡಿದ್ದರೆ ಎಂಬ ಮಾಹಿತಿ ಇಲ್ಲ. ಆದರೆ, ಪ್ರೋತ್ಸಾಹದಾಯಕ ಎಂದು ನಮೂದಿಸಿ ನಿವೇಶನಗಳನ್ನು ನೀಡಲಾಗಿದೆ. 5 ಲಕ್ಷ ಶುಲ್ಕ ಪಾವತಿ ಸ್ಥಳದಲ್ಲಿ ಕೇವಲ 600 ರೂ. ಪಾವತಿ ಮಾಡಿಸಿಕೊಂಡು ನಿವೇಶನ ನೀಡಲಾಗಿದೆ ಎಂದು ತಿಳಿದು ಬಂದಿದೆ.