ಬೆಂಗಳೂರು: ಮಾರುಕಟ್ಟೆಯಲ್ಲಿ ಈರುಳ್ಳಿ ಹಾಗೂ ಬೆಳ್ಳುಳ್ಳಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಮತ್ತೆ ಏರಿಕೆ ಕಂಡಿದೆ.
ಬೆಳ್ಳುಳ್ಳಿ ಕೆಜಿಗೆ 500 ರೂ. ನಿಂದ 550 ರೂ. ವರೆಗೆ ಮಾರಾಟವಾಗುತ್ತಿದೆ. ಅಲ್ಲದೇ, ಬೆಳ್ಳುಳ್ಳಿಯು ಎಪಿಎಂಸಿ ಮಾರುಕಟ್ಟೆಯಲ್ಲಿ 400 ರಿಂದ 450 ರೂಪಾಯಿಗೆ ಮಾರಾಟವಾಗುತ್ತಿದೆ. ಈರುಳ್ಳಿ ರಿಟೇಲ್ ನಲ್ಲಿ 70 ರೂ. ನಿಂದ 80 ರೂ. ಗೆ ಮಾರಾಟವಾಗುತ್ತಿದೆ. ಸದ್ಯದಲ್ಲೇ ಈರುಳ್ಳಿ ನೂರರ ಗಡಿ ದಾಟುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಎಪಿಎಂಸಿ ಮಾರುಕಟ್ಟೆಯಲ್ಲಿ ಸಾಧಾರಣ ಈರುಳ್ಳಿ ಕೆಜಿಗೆ 40 ರಿಂದ 50 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಉತ್ತಮ ಗುಣಮಟ್ಟದ ಈರುಳ್ಳಿ ಕೆಜಿಗೆ 60 ರೂ. ನಿಂದ 70 ರೂ. ವರೆಗೆ ಮಾರಾಟವಾಗಲಿದೆ. ಉತ್ತಮ ಗುಣಮಟ್ಟದ ಈರುಳ್ಳಿ ಕೆಜಿಗೆ 70 ರಿಂದ 80 ರೂಪಾಯಿಗೆ ಮಾರಾಟವಾಗುತ್ತಿದೆ.
ಫಸ್ಟ್ ಕ್ವಾಲಿಟಿ ಬೆಳ್ಳುಳ್ಳಿ ಕೆಜಿಗೆ 550 ರಿಂದ 600 ರೂ. ವರೆಗೆ ಮಾರಾಟವಾಗುತ್ತಿದೆ. ಬೇರೆ ರಾಜ್ಯಗಳಿಂದ ರಾಜ್ಯಕ್ಕೆ ಬರಬೇಕಿದ್ದ ಈರುಳ್ಳಿ ಹಾಗೂ ಬೆಳ್ಳುಳ್ಳಿ ಸಮರ್ಪಕವಾಗಿ ಬಾರದ ಹಿನ್ನೆಲೆಯಲ್ಲಿ ದರದಲ್ಲಿ ಏರಿಕೆಯಾಗುತ್ತಿದೆ ಎನ್ನಲಾಗಿದೆ. ಮುಂದಿನ ದಿನಗಳಲ್ಲೂ ಇದೇ ರೀತಿ ಮುಂದುವರೆದರೆ, ಬೆಳ್ಳುಳ್ಳಿ 600ರ ಗಡಿ ದಾಟಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಗ್ರಾಹಕರ ಜೇಬು ಮಾತ್ರ ಖಾಲಿಯಾಗುತ್ತಿದ್ದು, ಸರ್ಕಾರದ ವಿರುದ್ಧ ಹಿಡಿಶಾಪ ಹಾಕುವಂತಾಗಿದೆ.