ನಟ ಶಿವರಾಜ್ ಕುಮಾರ್ ಹಾಗೂ ಅವರ ಗೀತಾ ಶಿವರಾಜ್ ಕುಮಾರ್ ಅವರು ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಮಾಡಿಕೊಂಡು ಮುಡಿ ಕೊಟ್ಟಿದ್ದಾರೆ.
ಶಿವಣ್ಣ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಹಾರಲು ಸಿದ್ಧರಾಗುತ್ತಿದ್ದಾರೆ. ಈ ಮಧ್ಯೆ ಅವರು ತಿರುಪತಿಗೆ ಭೇಟಿ ನೀಡಿದ್ದಾರೆ. ಇಡೀ ಕುಟುಂಬದೊಂದಿಗೆ ತೆರಳಿರುವ ಅವರು ಮುಡಿ ಕೊಟ್ಟಿದ್ದಾರೆ. ಈ ವೇಳೆ ಫೋಟೋಗೆ ಫೋಸ್ ನೀಡಿದ್ದು, ವೈರಲ್ ಆಗುತ್ತಿವೆ.
ಶಿವಣ್ಣ ಅವರಿಗೆ ಏನಾಗಿದೆ ಎಂಬ ವಿಷಯ ರಿವೀಲ್ ಆಗಿಲ್ಲ. ಆದರೆ, ಅವರು ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಹೀಗಾಗಿ ತಿಮ್ಮಪ್ಪನ ಆಶೀರ್ವಾದ ಪಡೆದು ಅವರು ಹೊರಟಿದ್ದಾರೆ.
ಈಗಾಗಲೇ ಶಿವಣ್ಣ ನಟಿಸಿರುವ ‘ಭೈರತಿ ರಣಗಲ್’ ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. ಅಲ್ಲದೇ, ಅವರು ನಟಿಸಿರುವ 45 ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಸದ್ಯದಲ್ಲೇ ಬಿಡುಗಡೆಯಾಗುವ ಸಾಧ್ಯತೆ ಇದೆ.