ನವದೆಹಲಿ: ಭಾರತವನ್ನು ಅಭಿವೃದ್ಧಿ ರಾಷ್ಟ್ರವಾಗಿ ಮಾಡುವ ಸಂಕಲ್ಪ ಹೊಂದೋಣ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅಹಮದಾಬಾದ್‌ನಲ್ಲಿ ನಡೆದ ಕಾರ್ಯಕರ್ತರ ಸಮ್ಮೇಳನದಲ್ಲಿ ವರ್ಚುವಲ್ ಭಾಷಣದಲ್ಲಿ ಮಾತನಾಡಿದ ಅವರು, 2047ರಷ್ಟರಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಕೊಡುಗೆ ನೀಡುವಂತೆ ತಮ್ಮ ಕಾರ್ಯಕರ್ತರಿಗೆ ಹೇಳಿದ್ದಾರೆ.
ಈ ವೇಳೆ ಆಧ್ಯಾತ್ಮಿಕ ಮತ್ತು ಸ್ವಯಂಸೇವಕ ಚಾಲಿತ ಸಂಸ್ಥೆಯಾದ ಬೋಚಸನ್ವಾಸಿ ಅಕ್ಷರ ಪುರುಷೋತ್ತಮ್ ಸ್ವಾಮಿನಾರಾಯಣ ಸಂಸ್ಥೆ (BAPS)ಯ ಸ್ವಯಂಸೇವಕರ ಸಮರ್ಪಿತ ಸೇವೆಯನ್ನು ಶ್ಲಾಘಿಸಿದ್ದಾರೆ. 2047ರಲ್ಲಿ 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುವ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಪರಿವರ್ತಿಸುವ ಗುರಿಯತ್ತ ಕೆಲಸ ಮಾಡಲು ಪ್ರೋತ್ಸಾಹಿಸಿದರು.