ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ಈ ಮೂಲಕ 5 ಪಂದ್ಯಗಳ ಸರಣಿಯು 1-1 ಅಂತರದಿಂದ ಸಮಬಲಗೊಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಮೊದಲ ಇನ್ನಿಂಗ್ಸ್ ನಲ್ಲಿ ಬಾರತ ತಂಡ ಕೇವಲ 180 ರನ್ ಗಳಿಗೆ ಆಲೌಟ್ ಆಯಿತು. ನಂತರ ಪ್ರಥಮ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಮಾರ್ನಸ್ ಲಾಬುಶೇನ್ (64), ಟ್ರಾವಿಸ್ ಹೆಡ್ ಕೇವಲ 141 ಎಸೆತಗಳಲ್ಲಿ 140 ರನ್ ಗಳಿಸಿದರು. ಪರಿಣಾಮ ಆಸ್ಟ್ರೇಲಿಯಾ ತಂಡ 337 ರನ್ ಗಳಿಸಿತು.
ಹೀಗಾಗಿ 157 ರನ್ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಭಾರತ ತಂಡ ಮತ್ತೊಮ್ಮೆ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕರಾದ ಕೆಎಲ್ ರಾಹುಲ್ (7) ಹಾಗೂ ಯಶಸ್ವಿ ಜೈಸ್ವಾಲ್ (24) ಬೇಗನೆ ಔಟಾದರೆ, ಆ ಬಳಿಕ ಬಂದ ಶುಭ್ಮನ್ ಗಿಲ್ (28), ವಿರಾಟ್ ಕೊಹ್ಲಿ (11) ಹಾಗೂ ರೋಹಿತ್ ಶರ್ಮಾ (6) ಬಂದ ವೇಗದಲ್ಲೇ ಮರಳಿದರು. ಹೀಗಾಗಿ ಭಾರತ ತಂಡ ಕೇವಲ 175 ರನ್ ಗಳಿಗೆ ಆಲೌಟ್ ಆಯಿತು. ಇದರಿಂದಾಗಿ ಆಸ್ಟ್ರೇಲಿಯಾಕ್ಕೆ 19 ರನ್ ಗಳ ಗೆಲುವಿನ ಟಾರ್ಗೆಟ್ ಸಿಕ್ಕಿತು. 4 ಓವರ್ ಗಳಲ್ಲಿ ಗುರಿ ಮುಟ್ಟಿದ ಆಸ್ಟ್ರೇಲಿಯಾ 10 ವಿಕೆಟ್ ಗಳ ಜಯ ಸಾಧಿಸಿತು.