ಮಂಡ್ಯ: ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷದ ವತಿಯಿಂದ ಹಾಸನದಲ್ಲಿ ಬೃಹತ್ ಸಮಾವೇಶ ನಡೆಯಿತು. ಇದರ ಬೆನ್ನಲ್ಲೇ ಜೆಡಿಎಸ್ ನಿಂದ ಕೂಡ ಸಮಾವೇಶ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಈಗ ಸಮಾವೇಶದ ದಿನಾಂಕ ಮುಂದೂಡಲಾಗಿದೆ.
ಹಾಸನದಲ್ಲಿ ಕಾಂಗ್ರೆಸ್ ನಡೆಸಿದ್ದ ಜನಕಲ್ಯಾಣ ಸಮಾವೇಶಕ್ಕೆ ಕೌಂಟರ್ ಕೊಡಲು ಜೆಡಿಎಸ್, ಕೇಂದ್ರ ಸಚಿವ ಕುಮಾರಸ್ವಾಮಿಗೆ ಅಭಿನಂದನೆ ಹೆಸರಿನಲ್ಲಿ ಬಹತ್ ಸಮಾವೇಶ ಮಾಡಲು ಮುಂದಾಗಿತ್ತು. ಇದೇ ಇದೇ ಡಿಸೆಂಬರ್ 15ರಂದು ಮಂಡ್ಯದಲ್ಲಿ ನಡೆಯಬೇಕಿದ್ದ ಬೃಹತ್ ಸಮಾವೇಶವನ್ನು ಮುಂದೂಡಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಜೆಡಿಎಸ್ ಸಮಾವೇಶ ಮುಂಡೂಡಿಕೆ ಮಾಡಲಾಗಿದೆ ಎಂದು ಸ್ವತಃ ಮಾಜಿ ಸಚಿವ ಪುಟ್ಟರಾಜು ತಿಳಿಸಿದ್ದಾರೆ.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಇದೇ ಡಿಸೆಂಬರ್ 15ರಂದು ಕುಮಾರಸ್ವಾಮಿ ಅಭಿನಂದನಾ ಸಮಾರಂಭ ಮುಂದೂಡಿಕೆ ಮಾಡಲಾಗಿದೆ. ಕುಮಾರಸ್ವಾಮಿಯವರ ಸೂಚನೆ ಮೇರೆಗೆ ಮುಂದೂಡಿದ್ದೇವೆ ಎಂದಿದ್ದಾರೆ.
ಜೆಡಿಎಸ್ ಕಾರ್ಯಕ್ರಮದ ಬಗ್ಗೆ ಸಚಿವ ಚಲುವರಾಯಸ್ವಾಮಿ ವ್ಯಂಗ್ಯವಾಡಿರುವ ಕುರಿತು ಮಾತನಾಡಿದ ಅವರು, ಚಲುವರಾಯಸ್ವಾಮಿ ಚುನಾವಣೆಯಲ್ಲಿ ಸೋತಿಲ್ವಾ? ಸಮ್ಮಿಶ್ರವಾಗಿ ಚುನಾವಣೆ ಮಾಡಿದ್ದಾಗ ಇವರು ಏನು ಮಾಡಿದ್ರು. ಜನರ ತೀರ್ಮಾನ ಒಪ್ಪಿದ್ದೇವೆ. ಮೊದಲು ಅವರು ಗುಂಡಿಗಳನ್ನು ಮುಚ್ಚಿ, ರಸ್ತೆ ಸರಿಪಡಿಸಲಿ ಎಂದಿದ್ದಾರೆ.