ಬೆಳಗಾವಿ: ಕಾಂಗ್ರೆಸ್ ಸರ್ಕಾರ 17 ತಿಂಗಳಲ್ಲಿ 17 ಅವಾಂತರ ಮಾಡಿದ್ದೇ ಅದರ ಸಾಧನೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 17 ತಿಂಗಳು ಕಳೆದಿವೆ. ಆದರೆ, 17 ಅವಾಂತರ ಸೃಷ್ಟಿಸಿರುವುದೇ ಅದರ ಸಾಧನೆಯಾಗಿದೆ. ಸಿದ್ದರಾಮಯ್ಯ ನಿದ್ದೆರಾಮಯ್ಯ ಆಗಿದ್ದಾರೆ. ಸಿಎಂಗೆ ಯಾವುದೇ ಇಲಾಖೆಗಳ ಮೇಲೆಯೂ ಹಿಡಿತ ಇಲ್ಲ. ಅವರೇ ಮುಡಾ ಹಗರಣದಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ. ಬಾಣಂತಿಯರ ಸಾವಿನ ಪ್ರಕರಣ ಹೆಚ್ಚಾಗುತ್ತಿದ್ದರೂ ಭ್ರಷ್ಟಾಚಾರ ಮಾಡುತ್ತ, ನಮಗೂ ಅದಕ್ಕೂ ಸಂಬಂಧ ಇಲ್ಲ ಎನ್ನುವಂತೆ ಸರ್ಕಾರ ಇದೆ ಎಂದು ಆರೋಪಿಸಿದೆ.
ಜಿಲ್ಲೆಗಳಿಗೆ ಮಂತ್ರಿಗಳು ಭೇಟಿ ನೀಡಿ, ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸುತ್ತಿಲ್ಲ. ದುಡ್ಡು ಮಾಡಲು ಮಾತ್ರ ಜಿಲ್ಲೆಗಳಿಗೆ ಹೋಗುತ್ತಾರೆ. ಯಾವ ಮಂತ್ರಿಗಳು ಆಯಾ ಜಿಲ್ಲೆಗೆ ಹೋಗುತ್ತಿಲ್ಲ. ಇದು ಗುರುವಾರದ ಸರ್ಕಾರ, ಗುರುವಾರ ಮಾತ್ರ ಸಚಿವರು ವಿಧಾನಸೌಧಕ್ಕೆ ಬರುತ್ತಾರೆ ಎಂದು ಆರೋಪಿಸಿದ್ದಾರೆ.