ಬೆಳಗಾವಿ: ರಾಜ್ಯ ಸರ್ಕಾರ ಪಂಚಮಸಾಲಿ ಸಮುದಾಯದ ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಬೆಳಗಾವಿ ಜಿಲ್ಲಾಡಳಿತವು ರೈತರ ಟ್ರ್ಯಾಕ್ಟರ್ ಗಳಿಗೆ ನಿರ್ಭಂಧ ಹೇರುವ ಮೂಲಕ ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಆದರೆ, ನಮ್ಮ ಬೆಂಬಲ ಕೂಡ ಈ ಹೋರಾಟಕ್ಕೆ ಇದೆ. ಈ ಹಿಂದೆ ಯಡಿಯೂರಪ್ಪನವರ ಬೆಂಬಲ ಮೀಸಲಾತಿ ಹೋರಾಟಕ್ಕೆ ಇರಲಿಲ್ಲ ಎಂದು ಕೆಲವರು ಬಿಂಬುಸುವ ಕೆಲಸ ಮಾಡಿದರು.
ಆದರೆ, ಬಿಜೆಪಿ ಸರ್ಕಾರವಿದ್ದ ಸಂದರ್ಭದಲ್ಲಿ ಪಂಚಮಸಾಲಿ ಸಮದಾಯಕ್ಕೆ 3B ನೀಡಲಾಗಿತ್ತು. ಆದರೆ, ಸರ್ಕಾರ ಹೋರಾಟದ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಯಾವ ಸಮುದಾಯಕ್ಕೂ ಅನ್ಯಾಯ ಮಾಡುವ ಕೆಲಸ ಮಾಡಿಲ್ಲ ಎಂದಿದ್ದಾರೆ.