ಮಂಡ್ಯ : ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನರಾಗಿರುವ ಹಿನ್ನೆಲೆಯಲ್ಲಿ ನಾಳೆ ಮದ್ದೂರು ಬಂದ್ ಗೆ ಕರೆ ನೀಡಲಾಗಿದೆ.
ವಿಧಿವಶರಾದ ಹಿನ್ನೆಲೆಯಲ್ಲಿ ನಾಳೆ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು ನಾಳೆ ಮದ್ದೂರು ಬಂದ್ ಗೆ ಸ್ವಯಂಪ್ರೇರಿತವಾಗಿ ಕರೆ ನೀಡಿವೆ.
ಒಕ್ಕಲಿಗ ಸಂಘ, ದಲಿತ ಸಂಘಟನೆಗಳು, ಬಾರ್ ಎಂಡ್ ರೆಸ್ಟೋರೆಂಟ್ ಮಾಲೀಕರ ಸಂಘ ಸೇರಿದಂತೆ ಹಲವು ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿವೆ.
ಬುಧವಾರ ಬೆಳಗ್ಗೆ 9ರಿಂದ ಸಂಜೆ ಐದು ಗಂಟೆಯವರೆಗೆ ಬಂದ್ ನಡೆಯಲಿದೆ ಎಂದು ಸಂಘಟನೆಗಳ ನಾಯಕರು ಹೇಳಿದ್ದಾರೆ. ಹಿಂದೂ ಧರ್ಮದ ಒಕ್ಕಲಿಗ ಸಮುದಾಯದ ಪದ್ಧತಿಯಂತೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಡಿಸಿಎಂ ತಿಳಿಸಿದ್ದಾರೆ.
ಪಾರ್ಥಿವ ಶರೀರವು ನಾಳೆ ಬೆಳಗ್ಗೆ 8 ಗಂಟೆಗೆ ಬೆಂಗಳೂರಿನಿಂದ ಕೆಂಗೇರಿ ಬಸ್ ನಿಲ್ದಾಣ, ಬಿಡದಿ ಬಸ್ ನಿಲ್ದಾಣ, ರಾಮನಗರ ಬಸ್ ನಿಲ್ದಾಣದ, ಚನ್ನಪಟ್ಟಣ ಗಾಂಧಿ ವೃತ್ತ ಮಾರ್ಗವಾಗಿ ಮದ್ದೂರಿಗೆ ಸಾಗಲಿದೆ. ಆಯಾ ತಾಲೂಕಿನ ಜನ ಆಯಾ ಜಾಗದಲ್ಲಿ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಬಹುದು. ಮಧ್ಯಾಹ್ನ 3 ಗಂಟೆ ನಂತರ ಅವರ ಅಂತ್ಯಕ್ರಿಯೆ ಪ್ರಕ್ರಿಯೆ ನಡೆಯಲಿದೆ. ಶ್ರೀಗಂಧದ ಮರಗಳ ಚಿತೆಯ ಮೂಲಕ ಅಂತ್ಯಕ್ರಿಯೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ