ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ದಿನಾಂಕ ನಿಗದಿ ಮಾಡಿದೆ.
ಪ್ರಕರಣದ ವಿಚಾರಣೆಯನ್ನು ಡಿ. 12ಕ್ಕೆ ನಿಗದಿಪಡಿಸಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ಮುಂದೂಡಿತು. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರೊ.ರವಿವರ್ಮ ಕುಮಾರ್, ಮಧ್ಯಂತರ ಆದೇಶ ರದ್ದುಪಡಿಸಬೇಕು ಎಂದು ಮನವಿ ಮಾಡಿದರು.
ಆಕ್ಷೇಪ ವ್ಯಕ್ತಪಡಿಸಿದ ಯಡಿಯೂರಪ್ಪ ಪರ ವಕೀಲರು, “ಪೋಕ್ಸೊ ವಿಶೇಷ ನ್ಯಾಯಾಲಯದ ನೋಟಿಸ್ ಗೆ ವಕೀಲರ ಮೂಲಕ ಉತ್ತರ ನೀಡಿದ್ದಾರೆ. ಹೈಕೋರ್ಟ್ ನಿಂದ ಮಧ್ಯಂತರ ರಕ್ಷಣೆ ಪಡೆದು ವಿಚಾರಣೆಗೂ ಹಾಜರಾಗಿದ್ದಾರೆ. ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವುದು ಆರೋಪಿಯ ಹಕ್ಕು. ಆನಂತರ ವಿಚಾರಣೆಗೂ ಹಾಜರಾಗಿದ್ದಾರೆ. ಮನೆಯಲ್ಲಿ 20ರಿಂದ 25 ಜನರ ಸಮ್ಮುಖದಲ್ಲಿ ಇದು ನಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.
ದೂರುದಾರ ಮಹಿಳೆ ನಟೋರಿಯಸ್ ಆಗಿದ್ದು, 56 ಪ್ರಕರಣ ದಾಖಲಿಸಿದ್ದಾರೆ. ಭೂಮಿಯ ಮೇಲಿರುವ ಎಲ್ಲರ ಮೇಲೂ ಅವರು ದೂರು ದಾಖಲಿಸಿದ್ದಾರೆ ವಾದಿಸಿದ್ದಾರೆ.
ಈ ವೇಳೆ ಸರ್ಕಾರದ ಪರ ವಕೀಲರು, ಮೃತ ಮಹಿಳೆಯ ಮೇಲೆ ದೂರುದಾರರ ಪರ ವಕೀಲರ ಅಪಮಾನಕಾರಿ ಹೇಳಿಕೆ ಸರಿಯಲ್ಲವೆಂದು ಆಕ್ಷೇಪ ವ್ಯಕ್ತಪಡಿಸಿದರು. ವಾದ ವಿವಾದ ಆಲಿಸಿದ ಕೋರ್ಟ್ ವಿಚಾರಣೆಯನ್ನು ಮುಂದೂಡಿತು.