ಪುಷ್ಪ 2 ಚಿತ್ರದ ಯಶಸ್ಸಿನ ಖುಷಿಯಲ್ಲಿರುವ ಐಕಾನ್ ಸ್ಟಾರ್ ಅಲ್ಲು ಅರೆಸ್ಟ್ ಆಗಿದ್ದಾರೆ. ‘ಪುಷ್ಪ 2’ ಚಿತ್ರ ಬಿಡುಗಡೆಯಾಗಿದ್ದ ಸಂದರ್ಭದಲ್ಲಿ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಆದರೆ, ಅಲ್ಲಿ ದುರಂತವೊಂದು ನಡೆದಿದ್ದು, ಕಾಲ್ತುಳಿತಕ್ಕೆ ಮಹಿಳೆ ಬಲಿಯಾಗಿದ್ದು, ಅವರ ಪುತ್ರ ಗಂಭೀರವಾಗಿ ಗಾಯಗೊಂಡಿದ್ದರು.
ಅಲ್ಲು ಅರ್ಜುನ್ ಚಿತ್ರಮಂದಿರಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿದ್ದರಿಂದಾಗಿ ನಟ ಅಲ್ಲು ಸೇರಿದಂತೆ ಕೆಲವರ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನಟ ಅಲ್ಲು ಅರ್ಜುನ್ ಹಾಗೂ ಅವರ ಬಾಡಿಗಾರ್ಡ್ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದಕ್ಕೂ ಮುನ್ನ ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸ್ಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್, ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ. ಅಷ್ಟರಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ನಟ, ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.