ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಸಹಚರರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಲಕ್ಷ್ಮಣ್, ನಾಗರಾಜ್, ಅನುಕುಮಾರ್, ಜಗದೀಶ್, ಪ್ರದೂಷ್ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿದೆ. ಇಂದು (ಡಿಸೆಂಬರ್ 13) ಕೋರ್ಟ್ ತೀರ್ಪನ್ನು ಪ್ರಕಟಿಸಿದೆ. ಜೂನ್ನಲ್ಲಿ ರೇಣುಕಾ ಸ್ವಾಮಿ ಕೊಲೆ ನಡೆಯಿತು. ಈ ಪ್ರಕರಣದಲ್ಲಿ ಒಟ್ಟೂ 17 ಮಂದಿ ಅರೆಸ್ಟ್ ಆಗಿದ್ದರು. ಈ ಪೈಕಿ ಈಗಾಗಲೇ ಕೆಲವರಿಗೆ ಜಾಮೀನು ಸಿಕ್ಕಿದೆ. ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಕೆಲವರು ಇನ್ನೂ ಜೈಲಿನಲ್ಲೇ ಇದ್ದರು. ಅವರೆಲ್ಲರಿಗೂ ಜಾಮೀನು ಸಿಕ್ಕಿದೆ. ಈ ಪ್ರಕರಣದಲ್ಲಿ ಕೋರ್ಟ್ ಆದೇಶ ಹೊರಡಿಸಿದೆ. ಇದು ಅವರಿಗೆ ಬಿಗ್ ರಿಲೀಫ್ ನೀಡಿದೆ.
ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್, ನಾಗರಾಜ್, ಅನುಕುಮಾರ್, ಜಗದೀಶ್, ಪ್ರದೂಷ್ ಜಾಮೀನು ಕೋರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸಿದ ಎಲ್ಲರಿಗೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪವಿತ್ರಾ ಗೌಡ, ದರ್ಶನ್ ಪ್ರಮುಖ ಆರೋಪಿ ಆಗಿದ್ದಾರೆ. ಕೊಲೆಯಲ್ಲಿ ಸಹಾಯ ಮಾಡಿದ ಆರೋಪ ಇವರ ಸಹಚರರಿಗೆ ಇತ್ತು. ದರ್ಶನ್ ಜೊತೆ ಅವರುಗಳೂ ಬಂಧನಕ್ಕೆ ಒಳಗಾಗಿದ್ದರು. ಈಗ ಬರೋಬ್ಬರಿ 7 ತಿಂಗಳ ನಂತರ ಬೇಲ್ ಸಿಕ್ಕಿದೆ.