ನಟ ಅಲ್ಲು ಅರ್ಜನ್ ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪುಷ್ಪ 2’ ಚಿತ್ರದ ಪ್ರೀಮಿಯರ್ ಸಂದರ್ಭದಲ್ಲಿ ಹೈದರಾಬಾದ್ನ ಸಂಧ್ಯಾ ಥಿಯೇಟರ್ ಹತ್ತಿರ ಉಂಟಾಗಿದ್ದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಸಾವನ್ನಪ್ಪಿದ್ದರು. ಅಲ್ಲದೇ, ಮಹಿಳೆಯ 9 ವರ್ಷದ ಮಗ ಗಂಭೀರವಾಗಿ ಗಾಯಗೊಂಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜುನ್ ಕೂಡ ಆರೋಪಿ ಆಗಿದ್ದು, ಅವರಿಗೆ ಸಂಕಷ್ಟ ಹೆಚ್ಚುತ್ತಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಂದು ಅವರನ್ನು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಅವರನ್ನು ಪೊಲೀಸರು ಕೋರ್ಟ್ಗೆ ಹಾಜರು ಪಡಿಸಿದ್ದಾರೆ. ಕೋರ್ಟ್ 14 ದಿನ ನ್ಯಾಯಾಂಗ ಬಂಧನ ನೀಡಿ ಆದೇಶ ನೀಡಿದೆ.
ಪುಷ್ಪ 2 ಚಿತ್ರದ ಭರ್ಜರಿ ಗೆಲುವಿನ ಸಂಭ್ರಮದಲ್ಲಿದ್ದ ಅಲ್ಲು ಅರ್ಜುನ್ ಗೆ ಈಗ ಸಂಕಷ್ಟ ಶುರುವಾಗಿದೆ.