ನಟ ಅಲ್ಲು ಅರ್ಜುನ್ ಅವರನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದು, ಇದರಲ್ಲಿ ನನ್ನ ಪಾತ್ರ ಏನೂ ಇಲ್ಲ ಎಂದು ತೆಲಂಗಾಣ ಸಿಎಂ ಹೇಳಿದ್ದಾರೆ.
‘ಪುಷ್ಪ 2’ ಚಿತ್ರದ ಬಿಡುಗಡೆಯ ದಿನ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಗೆ ನಟ ಅಲ್ಲು ಅರ್ಜುನ್ ಹೋಗಿದ್ದ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿತ್ತು. ಈ ವೇಳೆ ಮಹಿಳೆಯೊಬ್ಬರು ಸಾವನ್ನಪ್ಪಿ, ಅವರ ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇದರ ಬೆನ್ನಲ್ಲೇ ರಾಜಕೀಯದ ಕೈವಾಡ ಇರಬಹುದು ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ಅಲ್ಲು ಅರ್ಜುನ್ ಸಿನಿಮಾ ನೋಡಲು ತೆರಳಿದ್ದರಿಂದಲೇ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರು. ಹೀಗಾಗಿಯೇ ಕಾಲ್ತುಳಿತ ಉಂಟಾಯಿತು. ಹೀಗಾಗಿ ದೂರು ದಾಖಲಾಗಿತ್ತು. ಪೊಲೀಸರು ಬಂಧಿಸಿದ್ದಾರೆ. ಇಲ್ಲಿ ಕಾನೂನು ಕೆಲಸ ಮಾಡಲಿದೆ. ಅವರ ಬಂಧನದಲ್ಲಿ ನನ್ನ ಹಸ್ತಕ್ಷೇಪವಿಲ್ಲ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಕಾನೂನು ಪ್ರಕ್ರಿಯೆ ನಡೆಸಲಾಗುವುದು ಎಂದಿದ್ದಾರೆ.