ಮೀಟರ್ ಬಡ್ಡಿ ಕಾಟಕ್ಕೆ ಬೇಸತ್ತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಈ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ರಾಯಲ್ಪಾಡು ಗ್ರಾಮದ ಕೋಮಲದೇವಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಎಂದು ತಿಳಿದು ಬಂದಿದೆ. ಕೋಮಲದೇವಿ ಮಗಳ ವಿದ್ಯಾಭ್ಯಾಸಕ್ಕಾಗಿ ಸಾಲ ಮಾಡಿಕೊಂಡಿದ್ದರು. ಶೇ. 10ರಂತೆ ವಾರದ ಬಡ್ಡಿ ನೀಡಿ, ಸಾಲಗಾರರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಅಲ್ಲದೇ, ಖಾಲಿ ಚೆಕ್ ಮೇಲೆ ಸಹಿ ಮಾಡಿಸಿಕೊಂಡು ಪ್ರತಿ ದಿನ ಮನೆಯ ಮುಂದೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದರು ಎನ್ನಲಾಗಿದೆ.
ಹೀಗಾಗಿ ಮಹಿಳೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಯಲಪಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೀಟರ್ ಬಡ್ಡಿ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.