ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಮತ್ತೊಮ್ಮೆ ಸಾರಾ ಗೋವಿಂದು ಗುಂಪು ಜಯ ಸಾಧಿಸಿದೆ.
ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ನರಸಿಂಹಲು ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ಕೆವಿ ವೆಂಕಟೇಶ್ ಆಯ್ಕೆ ಆಗಿದ್ದಾರೆ. ಸಾ.ರಾ. ಗೋವಿಂದ ಟೀಂ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆದ್ದಿದೆ.
ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಇವಿಎಂ ಬಳಕೆ ಮಾಡಲಾಗಿತ್ತು. ಸಾ.ರಾ. ಗೋವಿಂದು ಬಣ ಮತ್ತು ಭಾಮಾ ಹರೀಶ್ ಅವರ ಬಣಗಳ ಮಧ್ಯೆ ಜಿದ್ದಾಜಿದ್ದಿ ನಡೆದಿತ್ತು.
ಅಧ್ಯಕ್ಷ ಸ್ಥಾನಕ್ಕೆ ನರಸಿಂಹಲು ಎಂ, ಉಪಾಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ವಲಯ ಸಫೈರ್ ವೆಂಕಟೇಶ್, ನಿರ್ಮಾಪಕ ವಲಯ ಕಾರ್ಯದರ್ಶಿ ಸ್ಥಾನಕ್ಕೆ ಪ್ರವೀಣ್ ಕುಮಾರ್, ವಿತರಕ ವಲಯದಿಂದ ಉಪಾಧ್ಯಕ್ಷ ಸ್ಥಾನಕ್ಕೆ ಹೆಚ್.ಸಿ. ಶ್ರೀನಿವಾಸ್, ವಿತರಕ ವಲಯ ಗೌರವ ಕಾರ್ಯದರ್ಶಿ ಕುಮಾರ್ ಎಂ ಎನ್ (ಕೆಸಿಎನ್ ಕುಮಾರ್), ಪ್ರದರ್ಶಕ ವಲಯ ಉಪಾಧ್ಯಕ್ಷ ಸ್ಥಾನ ರಂಗಪ್ಪ, ಪ್ರದರ್ಶಕ ವಲಯ ಕಾರ್ಯದರ್ಶಿ ಸ್ಥಾನಕ್ಕೆ ಕುಶಾಲ್ ಎಲ್, ಖಚಾಂಚಿ ಸ್ಥಾನಕ್ಕೆ-ಚಿಂಗಾರಿ ಮಹದೇವ್ ಆಯ್ಕೆ ಆಗಿದ್ದಾರೆ.
ನಿರ್ಮಾಪಕ, ವಿತರಕ ಮತ್ತು ಪ್ರದರ್ಶಕ ವಲಯಗಳಿಂದ ಒಟ್ಟು 128 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದರು. ಈ ಪೈಕಿ 24 ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.